ಕರ್ನಾಟಕ

karnataka

ETV Bharat / state

ಗ್ರಾ.ಪಂ. ಚುನಾವಣೆ: ಸಕಲ ಸಿದ್ಧತೆಗೆ ತಹಶೀಲ್ದಾರರಿಗೆ ಡಿಸಿ ಕೆ.ಬಿ. ಶಿವಕುಮಾರ್ ಸೂಚನೆ - Shimoga DC KB Shivakumar instructs Tahsildars News

ಹಶೀಲ್ದಾರರೊಂದಿಗೆ ಗ್ರಾಮ ಪಂಚಾಯಿತಿ ಚುನಾವಣೆ, ಮಳೆಯಿಂದ ಸಂಭವಿಸಬಹುದಾದ ನೆರೆ, ಬರ ಮುಂತಾದ ಅವಘಡಗಳು ಹಾಗೂ ಮಾರಣಾಂತಿಕವಾಗಿರುವ ಕೊರೊನಾ ಮಾರಿಯನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ವತಿಯಿಂದ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಪ್ರಗತಿ ಪರಿಶೀಲನೆ ನಡೆಸಿದರು.

ತಹಶೀಲ್ದಾರರಿಗೆ ಡಿಸಿ ಕೆ.ಬಿ.ಶಿವಕುಮಾರ್ ಸೂಚನೆ
ತಹಶೀಲ್ದಾರರಿಗೆ ಡಿಸಿ ಕೆ.ಬಿ.ಶಿವಕುಮಾರ್ ಸೂಚನೆ

By

Published : Aug 5, 2020, 12:28 PM IST

ಶಿವಮೊಗ್ಗ: ರಾಜ್ಯ ಚುನಾವಣಾ ಆಯೋಗವು ಸದ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ಘೋಷಿಸುವ ಸಂಭವವಿದ್ದು, ಜಿಲ್ಲೆಯ ಎಲ್ಲಾ ತಾಲೂಕಿನ ಚುನಾವಣಾಧಿಕಾರಿಗಳು ಸಕಲ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ವಿಡಿಯೋ ಮೂಲಕ ಜಿಲ್ಲೆಯ ಎಲ್ಲಾ ತಹಶೀಲ್ದಾರರೊಂದಿಗೆ ಗ್ರಾಮ ಪಂಚಾಯಿತಿ ಚುನಾವಣೆ, ಮಳೆಯಿಂದ ಸಂಭವಿಸಬಹುದಾದ ನೆರೆ, ಬರ ಮುಂತಾದ ಅವಘಡಗಳು ಹಾಗೂ ಮಾರಣಾಂತಿಕವಾಗಿರುವ ಕೊರೊನಾ ಮಾರಿಯನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತದಿಂದ ಕೈಗೊಂಡ ಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಆಗಸ್ಟ್ 18ರೊಳಗಾಗಿ ಮತದಾರರನ್ನು ಗುರುತಿಸಿ, ಮತದಾರರ ಪಟ್ಟಿಯ ಕರಡನ್ನು ತಿದ್ದುಪಡಿಗೊಳಿಸಿ, ತ್ವರಿತವಾಗಿ ಜಿಲ್ಲಾ ಚುನಾವಣಾ ಶಾಖೆಗೆ ಕಳುಹಿಸಿಕೊಡಬೇಕು ಅಲ್ಲದೆ ಗ್ರಾಮ ಪಂಚಾಯಿತಿ ಸದಸ್ಯರ ಮೀಸಲಾತಿ ಪಟ್ಟಿಯನ್ನು ಸಿದ್ಧಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅವರು ತಹಶೀಲ್ದಾರರಿಗೆ ಸೂಚಿಸಿದರು.

ತಹಶೀಲ್ದಾರರು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಸಿಬ್ಬಂದಿಯನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಕೂಡದು. ಅನಿವಾರ್ಯವಾದಲ್ಲಿ ಈಗಲೇ ಬದಲಾವಣೆಗೆ ಕ್ರಮವಹಿಸಬೇಕು. ತಾಲೂಕು ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಸಿಬ್ಬಂದಿ ಅನುಮತಿ ಪಡೆಯದೆ ರಜೆಯ ಮೇಲೆ ತೆರಳದಂತೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಜಿಲ್ಲಾ ಯೋಜನಾ ನಿರ್ದೇಶಕ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ, ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ತಹಶೀಲ್ದಾರ್ ನಾಗರಾಜ್ ಸೇರಿದಂತೆ ಎಲ್ಲಾ ತಾಲೂಕುಗಳ ತಹಶೀಲ್ದಾರರು, ಚುನಾವಣಾಧಿಕಾರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ABOUT THE AUTHOR

...view details