ಶಿವಮೊಗ್ಗ :ನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಮಿಕರ ಸಮ್ಮಾನ್ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ, ಶ್ರಮದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ತಿಳಿಸಿದರು.
ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಶಸ್ತಿ ಪಡೆಯುವವರೆಲ್ಲರೂ ಪರಿಶ್ರಮ ಪಟ್ಟಿರುತ್ತಾರೆ, ಯಾವುದೇ ಪ್ರಶಸ್ತಿಯೂ ತಮ್ಮ ಕಾಲ ಬುಡದಲ್ಲಿ ಬರುವುದಿಲ್ಲ, ಅವರ ಕಾರ್ಯ ನಿಜಕ್ಕೂ ಮೆಚ್ಚು ಮೆಚ್ಚುವಂತಹದ್ದು ಎಂದರು.