ಶಿವಮೊಗ್ಗ: ಕೊಲೆಯಾದ ಬಜರಂಗದಳದ ಕಾರ್ಯಕರ್ತನ ಮೃತದೇಹ ಮೆರವಣಿಗೆಗೆ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸ್ಪಷ್ಟಪಡಿಸಿದ್ದಾರೆ.
ಬಜರಂಗದಳ ಕಾರ್ಯಕರ್ತನ ಮೃತದೇಹ ಮೆರವಣಿಗೆಗೆ ಅನುಮತಿ ನೀಡಿರಲಿಲ್ಲ: ಡಿಸಿ ಸ್ಪಷ್ಟನೆ.. - ಶಿವಮೊಗ್ಗದಲ್ಲಿ ಹರ್ಷನ ಶವದ ಮೆರವಣಿಗೆ ಬಗ್ಗೆ ಡಿಸಿ ಡಾ. ಸೆಲ್ವಮಣಿ ಸ್ಪಷ್ಟನೆ
ಹರ್ಷನ ಶವದ ಮೆರವಣಿಗೆಗೆ ನಾವು ಅನುಮತಿ ನೀಡಿರಲಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾಧಿಕಾರಿ ಡಾ. ಸೆಲ್ವಮಣಿ
ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ಹರ್ಷನ ಶವದ ಮೆರವಣಿಗೆಗೆ ನಾವು ಯಾವುದೇ ಅನುಮತಿ ನೀಡಿರಲಿಲ್ಲ. ಜಿಲ್ಲಾಡಳಿತ ಎಲ್ಲ ಸೂಕ್ತ ಕ್ರಮ ತೆಗೆದುಕೊಂಡಿದೆ. ಇಂದು ಬೆಳಗಿನ ಜಾವ ಎರಡು ಆಟೋ ಹಾಗೂ ಎರಡು ಬೈಕ್ಗಳಿಗೆ ಬೆಂಕಿ ಹಚ್ಚಲಾಗಿದೆ. ಸದ್ಯ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದರು.
ಓದಿ:ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ಸೂಕ್ಷ್ಮವಾಗಿ ನಡೆಸುತ್ತಿದ್ದೇವೆ: ಎಡಿಜಿಪಿ ಪ್ರತಾಪ್ ರೆಡ್ಡಿ
Last Updated : Feb 22, 2022, 4:14 PM IST