ಶಿವಮೊಗ್ಗ :ಲಾಕ್ಡೌನ್ನಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಜೂನ್-18ರಂದು ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ ಎಂದು ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪರೀಕ್ಷಾ ಪೂರ್ವ ಸಿದ್ಧತೆಯ ಸಭೆ ನಡೆಯಿತು. ಜಿಲ್ಲಾ ಪದವಿ ಪೂರ್ವ ನಿರ್ದೇಶಕ ನಾಗರಾಜ್ರವರು ಮೊದಲು ತಮ್ಮ ಇಲಾಖೆಯ ತಯಾರಿಯ ಬಗ್ಗೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಕೊರೊನಾ ಹಿನ್ನೆಲೆ ಪರೀಕ್ಷೆಯನ್ನು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ನಡೆಸಬೇಕಾಗಿದೆ. ಇದರಿಂದ ಪರೀಕ್ಷಾ ಕೇಂದ್ರಕ್ಕೆ ಮಕ್ಕಳು ಮಾಸ್ಕ್ ಧರಿಸಿ ಬರುವಂತೆ ಸೂಚಿಸಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸಬೇಕು. ಜಿಲ್ಲೆಯಲ್ಲಿ ಸುಮಾರು 18 ಸಾವಿರ ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಮಕ್ಕಳನ್ನು ಕರೆತರಲು ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ.