ಶಿವಮೊಗ್ಗ:ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳನ್ನು ಪತ್ತೆ ಹಚ್ಚಲು ಪರೀಕ್ಷೆ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು.
ಜಿಲ್ಲಾಭವನ ಸಭಾಂಗಣದಲ್ಲಿ ಜಿಲ್ಲಾ ಸರ್ವೇಕ್ಷಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಗಂಟಲು ದ್ರವ ಸಂಗ್ರಹಿಸುವ ಕಾರ್ಯಕ್ಕೆ 19 ಸಂಚಾರಿ ತಂಡಗಳಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರ ಹಂತದಲ್ಲಿ 63 ತಪಾಸಣಾ ತಂಡಗಳಿವೆ. ಶಿವಮೊಗ್ಗ ನಗರ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳಲ್ಲಿ ಸಹ ಗಂಟಲು ದ್ರವ ಸಂಗ್ರಹಿಸುವ ಕಾರ್ಯವನ್ನು ಆರಂಭಿಸಬೇಕು. ಇದಕ್ಕಾಗಿ ಐದು ಸಂಚಾರಿ ತಂಡಗಳನ್ನು ಸಜ್ಜುಗೊಳಿಸುವಂತೆ ತಿಳಿಸಿದರು.
ಪ್ರಸ್ತುತ ಆರ್ಟಿಪಿಸಿಆರ್ ಮೂಲಕ ಪ್ರತಿದಿನ 1200 ಸ್ಯಾಂಪಲ್ ಪರೀಕ್ಷೆ ನಡೆಸಲಾಗುತ್ತಿದ್ದು, ಇದನ್ನು 1500ಕ್ಕೆ ಹೆಚ್ಚಿಸಬೇಕು. ಇದೇ ರೀತಿ ಆರ್ಎಟಿ ಮೂಲಕ 600 ಪರೀಕ್ಷೆ ನಡೆಸಲಾಗುತ್ತಿದ್ದು, ಇದನ್ನು 1200ಕ್ಕೆ ಹೆಚ್ಚಿಸಬೇಕು. ಪ್ರತಿದಿನ ಮೆಗ್ಗಾನ್ ಆಸ್ಪತ್ರೆಯಲ್ಲಿ 500, ವಿಡಿಆರ್ಎಲ್ನಲ್ಲಿ 500 ಪರೀಕ್ಷೆ ಗುರಿಯನ್ನು ಸಾಧಿಸಬೇಕು. ಒಂದೆರಡು ದಿನಗಳಲ್ಲಿ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಗಂಟಲು ದ್ರವ ಪರೀಕ್ಷೆ ಆರಂಭವಾಗಲಿದ್ದು, ಅಲ್ಲಿಯೂ ದಿನಕ್ಕೆ 500 ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಹೋಂ ಕ್ವಾರಂಟೈನ್ ಪ್ರಮಾಣ ಹೆಚ್ಚಳ:
ಕೊರೊನಾ ಪರೀಕ್ಷೆ ಹೆಚ್ಚಳಕ್ಕೆ ಕ್ರಮ: ಶಿವಮೊಗ್ಗ ಜಿಲ್ಲಾಧಿಕಾರಿ - Shimoga latest news
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಕೊರೊನಾ ಸಂಬಂಧ ಚರ್ಚೆ ನಡೆಸಿದರು.
![ಕೊರೊನಾ ಪರೀಕ್ಷೆ ಹೆಚ್ಚಳಕ್ಕೆ ಕ್ರಮ: ಶಿವಮೊಗ್ಗ ಜಿಲ್ಲಾಧಿಕಾರಿ DC meeting](https://etvbharatimages.akamaized.net/etvbharat/prod-images/768-512-02:39:36:1597828176-kn-smg-03-dc-meeting-ka100111-19082020135712-1908f-1597825632-258.jpg)
ಪ್ರಾಯೋಗಿಕವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಹೋಂ ಕ್ವಾರಂಟೈನ್ ಪ್ರಮಾಣವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಹೋಂ ಕ್ವಾರಂಟೈನ್‍ನಲ್ಲಿರುವವರಿಗೆ ಅಗತ್ಯವಿರುವ ಸಾಧನಗಳನ್ನು ಖಾತ್ರಿಪಡಿಸಿ ಅವರ ನಿರಂತರ ಮೇಲ್ವಿಚಾರಣೆಗೆ ವ್ಯವಸ್ಥೆ ಮಾಡಬೇಕು ಎಂದರು.
ಸೋಂಕಿತರ ಮೇಲೆ ನಿಗಾ:
ಗ್ರಾಮೀಣ ಪ್ರದೇಶದಲ್ಲಿ ಕನಿಷ್ಠ 6 ಮಂದಿ ಹಾಗೂ ನಗರ ಪ್ರದೇಶದಲ್ಲಿ ಕನಿಷ್ಠ 10 ಮಂದಿ ಪ್ರಾಥಮಿಕ ಸೋಂಕಿತರನ್ನು ಗುರುತಿಸಿ ಅವರ ಮೇಲೆ ನಿಗಾ ಇರಿಸಬೇಕು. ಕೋವಿಡ್ ಕೇರ್ ಸೆಂಟರ್ನಲ್ಲಿ ನಿಯೋಜಿಸಲಾಗಿರುವ ಆಯುರ್ವೇದಿಕ್ ವೈದ್ಯರು ಕರ್ತವ್ಯಕ್ಕೆ ತೆರಳಲು ಹಿಂದೇಟು ಹಾಕಿದರೆ ಕ್ರಮ ಕೈಗೊಳ್ಳಲಾಗುವುದು. ಅನಧಿಕೃತವಾಗಿ ರಜೆ ಹಾಕಿರುವ ವೈದ್ಯರಿಗೆ ನೋಟಿಸ್ ಜಾರಿಗೊಳಿಸುವಂತೆ ಸೂಚಿಸಿದರು.