ಕರ್ನಾಟಕ

karnataka

ETV Bharat / state

ಅನುಕಂಪ ಆಧಾರಿತ ನೇಮಕ ವಿಳಂಬ ತಪ್ಪಿಸಲು ಕ್ರಮ : ಕೆ.ಬಿ.ಶಿವಕುಮಾರ್​ - ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸಭೆ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಜಿಲ್ಲಾಧಿಕಾರಿ ಸಭೆ
DC Shivkumar made meeting with officers at Shimoga

By

Published : Jan 16, 2021, 11:39 AM IST

ಶಿವಮೊಗ್ಗ:ಜಿಲ್ಲೆಯಲ್ಲಿ ಅನುಕಂಪ ಆಧಾರಿತ ನೇಮಕಾತಿಗಳಲ್ಲಿ ತೀವ್ರಗತಿಯ ವಿಳಂಬವಾಗುತ್ತಿದ್ದು, ಸದರಿ ಪ್ರಕರಣದ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಲಾಖೆಯಲ್ಲಿ ಖಾಯಂಪೂರ್ವ ಸೇವಾವಧಿ ಘೋಷಣೆ, ಕಾಲಮಿತಿ ಬಡ್ತಿ ಮತ್ತು ವೇತನ ವಿಳಂಬವಾಗುತ್ತಿರುವ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳ, ಸಿಬ್ಬಂದಿ ಗಮನಕ್ಕೆ ರತಲಾಗಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸಿಬ್ಬಂದಿ ವೇತನವನ್ನು ಸಕಾಲದಲ್ಲಿ ಮಾಡುವಂತೆ ಸೂಚನೆ ನೀಡಲಾಗುವುದು ಎಂದರು.

ವಿವಿಧ ಇಲಾಖೆಗಳ ಕಟ್ಟಡಗಳಲ್ಲಿ ಶೌಚಾಲಯ ವ್ಯವಸ್ಥೆಯ ಕೊರತೆ, ಕಟ್ಟಡದ ಮೇಲ್ಭಾಗದಲ್ಲಿ ಗಿಡ - ಗಂಟೆಗಳು ಬೆಳೆದಿರುವುದು, ಆವರಣದಲ್ಲಿ ಕಳೆ ಬೆಳೆದಿರುವುದು, ಕೊಠಡಿಗಳಲ್ಲಿ ಬಳಕೆಯಾಗದ ವಸ್ತುಗಳನ್ನು ಸಂಗ್ರಹಿಸಿರುವುದು, ಅನುಪಯುಕ್ತ ವಾಹನಗಳನ್ನು ವಿಲೇವಾರಿ ಮಾಡದಿರುವುದು ಇಂತಹ ಹಲವು ಕಾರಣಗಳಿಂದ ಕಟ್ಟಡದ ಅಂದ ಹಾಳಾಗುತ್ತಿದೆ. ಇಂತಹವುಗಳಿಂದ ಕಟ್ಟಡಗಳನ್ನು ಸುಸ್ಥಿತಿಯಲ್ಲಿಡಲು ಅನುಪಯುಕ್ತ ವಸ್ತುಗಳನ್ನು ವಿಲೇವಾರಿ ಮಾಡಲು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

ಜಿಲ್ಲೆಯಲ್ಲಿ ಶಾಲಾ - ಕಾಲೇಜುಗಳ ಜಾಗ ಒತ್ತುವರಿಯಾಗುತ್ತಿರುವ ಪ್ರಕರಣಗಳು ಅಲ್ಲಲ್ಲಿ ಕೇಳಿ ಬರುತ್ತಿವೆ. ಅದಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡವನ್ನು ರಚಿಸಿ ಸರ್ವೇ ಮಾಡಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆರಂಭದ ಹಂತವಾಗಿ ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಹತ್ತು ಇಲಾಖೆಗಳನ್ನು ಆಯ್ಕೆ ಮಾಡಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಹಾಗೂ ನೌಕರರ ಸಂಘದ ಬೆಂಗಳೂರು ವಿಭಾಗದ ವಿಭಾಗೀಯ ಉಪಾಧ್ಯಕ್ಷ ಆರ್.ಮೋಹನ್‍ಕುಮಾರ್ ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು, ತಾಲೂಕು ಸಂಘಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ABOUT THE AUTHOR

...view details