ಕರ್ನಾಟಕ

karnataka

ETV Bharat / state

ವಿಶೇಷ ಶಿಕ್ಷಕರ ಗೌರವಧನ ಹೆಚ್ಚಳಕ್ಕೆ ಆಗ್ರಹ: ಶಿವಮೊಗ್ಗದಲ್ಲಿ ಪ್ರತಿಭಟನೆ

ವಿಶೇಷಚೇತನರ ಶಾಲೆಗಳಲ್ಲಿ ಸೇವಾನಿರತರಾಗಿರುವ ವಿಶೇಷ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಗೌರವಧನವನ್ನು ದ್ವಿಗುಣಗೊಳಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.

By

Published : Dec 2, 2020, 7:34 PM IST

ಶಿವಮೊಗ್ಗ:ರಾಜ್ಯದ ವಿಶೇಷಚೇತನರ ಶಾಲೆಗಳಲ್ಲಿ ಸೇವಾನಿರತರಾಗಿರುವ ವಿಶೇಷ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಗೌರವಧನವನ್ನು ದ್ವಿಗುಣಗೊಳಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ವಿಶೇಷ ಶಾಲಾ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಬಳಿಕ ಡಿಸಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದ ವಿಶೇಷ ಚೇತನರ ಶಾಲೆಗಳಲ್ಲಿ ಸೇವಾನಿರತರಾಗಿರುವ ವಿಶೇಷ ಶಿಕ್ಷಕರು ಮತ್ತು ಶಿಕ್ಷಕ ಸಿಬ್ಬಂದಿಗಳಿಗೆ ಗೌರವಧನವನ್ನು ದ್ವಿಗುಣ ಗೊಳಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಉದ್ಯೋಗ ಭದ್ರತೆ ಒದಗಿಸಬೇಕು. ಅನುದಾನ ನೀತಿ ಸಂಹಿತೆ ಪ್ರಕಾರ ರಾಜ್ಯದ ಕೇವಲ 32 ಸಂಸ್ಥೆಗಳಿಗೆ ಅನುದಾನ ಸಿಗುತ್ತಿದೆ. ಅನುದಾನಿತ ಶಾಲಾ ಶಿಕ್ಷಕರಿಗೆ ಸಂಬಳ ನೀಡುವ ವ್ಯವಸ್ಥೆ ರೀತಿಯಲ್ಲಿಯೇ ನಮಗೂ ಸಂಬಳ ನೀಡಬೇಕು ಎಂದು ಒತ್ತಾಯಿಸಿದರು.

ವಿಶೇಷ ಶಿಕ್ಷಕರಿಗೆ 6,500 ರೂ. ಇತರ ಸಿಬ್ಬಂದಿಗೆ 4000 ರೂ. ಗೌರವ ಸಿಗುತ್ತಿತ್ತು. 2014ರಲ್ಲಿ ಸಿದ್ದರಾಮಯ್ಯ ಸರ್ಕಾರವಿದ್ದಾಗ ಕ್ರಮವಾಗಿ 13500 ರೂ. ಹಾಗೂ 9000 ರೂ. ಗೌರವಧನ ಏರಿಕೆ ಮಾಡಿದ್ದರು. ಆದರೆ, ಅಂದಿನಿಂದ ಇಂದಿನವರೆಗೂ ವೇತನ ಏರಿಕೆ ಆಗಿಲ್ಲ. ಹಾಗಾಗಿ ಶಿಶು ಕೇಂದ್ರೀಕೃತ ಸಹಾಯಧನ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ನಿಗದಿತ ಮಾಡಿರುವ ಕನಿಷ್ಠ ವೇತನ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ABOUT THE AUTHOR

...view details