ಶಿವಮೊಗ್ಗ: ಸಿಗಂದೂರು ದೇವಸ್ಥಾನಕ್ಕೆ ಜಿಲ್ಲಾಧಿಕಾರಿಗಳು ನೇಮಿಸಿರುವ ಮೇಲ್ವಿಚಾರಣಾ ಮತ್ತು ಸಲಹಾ ಸಮಿತಿಯನ್ನು ರದ್ದುಗೊಳಿಸಿ ಈ ಹಿಂದೆ ಇದ್ದ ರೀತಿಯಲ್ಲೇ ಯಥಾಸ್ಥಿತಿ ಮುಂದುವರಿಸಬೇಕು ಎಂದು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ರಾಜ್ಯಾ ಗೌರವ ಸಲಹೆಗಾರರಾದ ಸತ್ಯಜಿತ್ ಸುರತ್ಕಲ್ ಒತ್ತಾಯಿಸಿದ್ದಾರೆ.
ಸಿಗಂದೂರು ದೇವಸ್ಥಾನಕ್ಕೆ ನೇಮಿಸಿರುವ ಸಲಹಾ ಸಮಿತಿ ರದ್ದುಗೊಳಿಸಲು ಆಗ್ರಹ - ಸಿಗಂದೂರು ದೇವಸ್ಥಾನ ಮೇಲ್ವಿಚಾರಣಾ ಮತ್ತು ಸಲಹಾ ಸಮಿತಿ ವಿವಾದ
ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ಸೇರಿಸಬಾರದು. ಹಾಗೆಯೇ ಜಿಲ್ಲಾಧಿಕಾರಿಗಳು ನೇಮಿಸಿರುವ ಮೇಲ್ವಿಚಾರಣಾ ಮತ್ತು ಸಲಹ ಸಮಿತಿಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಲಾಯಿತು.
![ಸಿಗಂದೂರು ದೇವಸ್ಥಾನಕ್ಕೆ ನೇಮಿಸಿರುವ ಸಲಹಾ ಸಮಿತಿ ರದ್ದುಗೊಳಿಸಲು ಆಗ್ರಹ Demanding the cancellation of an Advisory Committee appointed to the Sigandur Temple](https://etvbharatimages.akamaized.net/etvbharat/prod-images/768-512-9324606-264-9324606-1603772980720.jpg)
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲಕ್ಷಾಂತರ ಭಕ್ತರನ್ನು ಹೊಂದಿರುವ ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ಸೇರಿಸಬಾರದು. ಹಾಗೆಯೇ ಜಿಲ್ಲಾಧಿಕಾರಿಗಳು ನೇಮಿಸಿರುವ ಮೇಲ್ವಿಚಾರಣಾ ಮತ್ತು ಸಲಹ ಸಮಿತಿಯನ್ನು ಕೂಡಲೇ ರದ್ದುಗೊಳಿಸಬೇಕು ಹಾಗೂ ದೇವಸ್ಥಾನವನ್ನು ಹಿಂದೆ ಇದ್ದಂತೆ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂದು ಆಗ್ರಹಿಸಿದರು.
ಇದೇ ತಿಂಗಳು 29ರಂದು ಕರೆ ನೀಡಿದ್ದ ಸಿಗಂದೂರು ಚಲೋ ಚಳುವಳಿಯನ್ನು ಮುಂದೂಡಲಾಗಿದೆ . 29ರಂದು ಜಿಲ್ಲಾಧಿಕಾರಿಗಳು ನೇಮಿಸಿರುವ ಸಲಹಾ ಸಮಿತಿಯ ಮೊದಲ ಸಭೆಯಿದ್ದು, ಈ ಸಭೆಯಲ್ಲಿ ಆಗುವ ತೀರ್ಮಾನದ ಮೇಲೆ ಮುಂದಿನ ಪ್ರತಿಭಟನೆಯ ರೂಪುರೇಷಗಳು ಆಗುತ್ತವೆ. ಒಂದು ವೇಳೆ ಸಲಹಾ ಸಮಿತಿ ರದ್ದುಗೊಳಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಎಚ್ಚರಿಸಿದರು.