ಶಿವಮೊಗ್ಗ:ಜಿಲ್ಲಾ ಸಹಕಾರಿ ಬ್ಯಾಂಕ್ ನಿವೃತ್ತ ನೌಕರರ ನಿವೃತ್ತಿ ವೇತನ ನೀಡಬೇಕು ಹಾಗೂ ಮೃತ ನೌಕರರ ಕುಟುಂಬ ನಿರ್ವಹಣೆಗಾಗಿ ನಿವೃತ್ತಿ ವೇತನ ಮಂಜೂರು ಮಾಡಬೇಕು ಎಂದು ಜಿಲ್ಲಾ ಸಹಕಾರ ಬ್ಯಾಂಕ್ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಬ್ಯಾಂಕ್‌ನ ಆಡಳಿತ ಮಂಡಳಿಯನ್ನು ಒತ್ತಾಯಿಸಿದೆ.
ಶಿವಮೊಗ್ಗ: ಡಿಸಿಸಿ ಬ್ಯಾಂಕ್ ನೌಕರರ ನಿವೃತ್ತಿ ವೇತನ ನೀಡುವಂತೆ ಆಗ್ರಹ - ಜಿಲ್ಲಾ ಸಹಕಾರ ಬ್ಯಾಂಕ್ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘ
ಡಿಸಿಸಿ ಬ್ಯಾಂಕ್ನಲ್ಲಿ ಸೇವೆ ಸಲ್ಲಿಸಿದ ನೌಕರರಿಗೆ ನಿವೃತ್ತಿ ವೇತನ ಸಿಗುತ್ತಿಲ್ಲ. ನೌಕರರಿಗೆ ನ್ಯಾಯವಾಗಿ ದೊರೆಯುವ ನಿವೃತ್ತಿ ವೇತನ ನೀಡಬೇಕು ಎಂದು ಹಲವು ಬಾರಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಿಗೆ ಮನವಿ ಮಾಡಿಕೊಂಡಿದ್ದರು, ಗಮನಹರಿಸಿಲ್ಲ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ದೂರಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಘದ ಸದಸ್ಯರು, ಶಿವಮೊಗ್ಗ ಡಿಸಿಸಿ ಬ್ಯಾಂಕ್ 1953 ರಿಂದ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಾದ್ಯಂತ ಶಾಖೆಗಳನ್ನು ಹೊಂದಿದೆ. ಇಲ್ಲಿ ಸೇವೆ ಸಲ್ಲಿಸಿದ ನೌಕರರಿಗೆ ನಿವೃತ್ತಿ ವೇತನ ಸಿಗುತ್ತಿಲ್ಲ. ನೌಕರರಿಗೆ ನ್ಯಾಯವಾಗಿ ದೊರೆಯುವ ನಿವೃತ್ತಿ ವೇತನ ನೀಡಬೇಕು ಎಂದು ಹಲವು ಬಾರಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಿಗೆ ಮನವಿ ಮಾಡಿಕೊಂಡಿದ್ದರು, ಗಮನಹರಿಸಿಲ್ಲ ಎಂದು ಸಂಘದ ಕಾರ್ಯಕರ್ತರು ದೂರಿದರು.
ರಾಜ್ಯದ ಕೆಲವು ಡಿಸಿಸಿ ಬ್ಯಾಂಕ್ ಗಳು ತಮ್ಮ ನೌಕರರಿಗೆ ನಿವೃತ್ತಿವೇತನ ನೀಡುತ್ತಿವೆ. ರಾಜ್ಯ ಸರ್ಕಾರ ಇತ್ತ ಗಮನ ಹರಿಸಿ ಎಲ್ಲಾ ಜಿಲ್ಲೆಗಳಿಗೆ ಏಕರೂಪ ನಿವೃತ್ತಿ ವೇತನ ಜಾರಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.