ಕರ್ನಾಟಕ

karnataka

ETV Bharat / state

Jobs in Shimoga: ಶಿವಮೊಗ್ಗ ಜಿಲ್ಲಾ ಪಂಚಾಯಿತಿ ನೇಮಕಾತಿ; ಡೇಟಾ ಎಂಟ್ರಿ ಆಪರೇಟರ್​ ಸೇರಿದಂತೆ ಹಲವು ಹುದ್ದೆ - ಡಿಇಒ ಸೇರಿದಂತೆ ವಿವಿಧ ತಾಂತ್ರಿಕ ಸಹಾಯಕರ

ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಖಾಲಿ ಇರುವ ಈ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ನಡೆಸಲಾಗುವುದು

DEO and Technical Assistant Recruitment in Shimoga Zilla panchayat
DEO and Technical Assistant Recruitment in Shimoga Zilla panchayat

By ETV Bharat Karnataka Team

Published : Oct 21, 2023, 12:39 PM IST

ಶಿವಮೊಗ್ಗ ಜಿಲ್ಲಾ ಪಂಚಾಯತ್​ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಡಿಇಒ ಸೇರಿದಂತೆ ವಿವಿಧ ತಾಂತ್ರಿಕ ಸಹಾಯಕರ ಹುದ್ದೆಗೆ ನೇಮಕಾತಿ ಹೊರಡಿಸಲಾಗಿದೆ. ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಈ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ

ಹುದ್ದೆ ವಿವರ: ಶಿವಮೊಗ್ಗ ಜಿಲ್ಲಾ ಪಂಚಾಯತ್​ನಲ್ಲಿ ಖಾಲಿ ಇರುವ 16 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳು ಜಿಲ್ಲೆಯ ಶಿವಮೊಗ್ಗ, ಭದ್ರಾವತಿ ಮತ್ತು ಸಾಗರ, ಸೊರಬ, ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕುಗಳಲ್ಲಿ ಖಾಲಿ ಇದೆ.

  • ಡೇಟಾ ಎಂಟ್ರಿ ಆಪರೇಟರ್​ 3
  • ತಾಂತ್ರಿಕ ಸಹಾಯಕರು (ಅರಣ್ಯ) 4
  • ತಾಂತ್ರಿಕ ಸಹಾಯಕರು (ಕೃಷಿ) 3
  • ತಾಂತ್ರಿಕ ಸಹಾಯಕರು (ತೋಟಗಾರಿಕೆ) 4
  • ತಾಂತ್ರಿಕ ಸಹಾಯಕರು (ಸಿವಿಲ್​) 2

ವಿದ್ಯಾರ್ಹತೆ: ಡೇಟಾ ಎಂಟ್ರಿ ಆಪರೇಟರ್​ ಹುದ್ದೆಗೆ ಪಿಯುಸಿ ಜೊತೆಗೆ ಕಂಪ್ಯೂಟರ್​ ಮತ್ತು ಟೈಪಿಂಗ್​ ಜ್ಞಾನವನ್ನು ಹೊಂದಿರಬೇಕು. ತಾಂತ್ರಿಕ ಸಹಾಯಕರು (ಅರಣ್ಯ) ಹುದ್ದೆಗೆ ಅರಣ್ಯಶಾಸ್ತ್ರದಲ್ಲಿ ಪದವಿ, ತಾಂತ್ರಿಕ ಸಹಾಯಕರು (ಕೃಷಿ) ಕೃಷಿ ವಿಜ್ಞಾನದಲ್ಲಿ ಪದವಿ, ತಾಂತ್ರಿಕ ಸಹಾಯಕರು (ತೋಟಗಾರಿಕೆ) ತೋಟಗಾರಿಕೆ ಪದವಿ ಮತ್ತು ಸಿವಿಲ್​ ತಾಂತ್ರಿಕ ಹುದ್ದೆಗೆ ಸಿವಿಲ್​ನಲ್ಲಿ ಇಂಜಿನಿಯರಿಂಗ್​ ಪದವಿ ಜೊತೆಗೆ ಸಾಮಾನ್ಯ ಕಂಪ್ಯೂಟರ್​ ಜ್ಞಾನವನ್ನು ಹೊಂದಿರಬೇಕು.

ಅನುಭವ:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಮೂರು ವರ್ಷ ಕಾರ್ಯ ನಿರ್ವಹಣೆ ಅನುಭವ ಹೊಂದಿರಬೇಕು.

ವಯೋಮಿತಿ:ತಾಂತ್ರಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ಮತ್ತು ಗರಿಷ್ಠ 40 ವರ್ಷದ ವಯೋಮಿತಿ ಹೊಂದಿರಬೇಕು. ಡೇಟಾ ಎಂಟ್ರಿ ಆಪರೇಟರ್​ ಹುದ್ದೆಗೆ ಗರಿಷ್ಠ 35 ವರ್ಷದ ಹುದ್ದೆ ಅನುಭವವನ್ನು ಹೊಂದಿರಬೇಕು.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಶಿವಮೊಗ್ಗ ಜಿಲ್ಲಾ ಪಂಚಾಯತ್​ನ ಅಧಿಕೃತ ಜಾಲತಾಣದಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗೆ ಅಕ್ಟೋಬರ್​ 23 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಸಲು ಕಡೆಯ ದಿನ ನವೆಂಬರ್​ 3 ಆಗಿದೆ.

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ವಿವರಗಳಿಗೆ shimoga.nic.in ಇಲ್ಲಿಗೆ ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: ರಾಯಚೂರು ಜಿಲ್ಲಾ ಪಂಚಾಯತ್​ನಲ್ಲಿ ಉದ್ಯೋಗಾವಕಾಶ: ಸಂಪೂರ್ಣ ಮಾಹಿತಿ

ABOUT THE AUTHOR

...view details