ಶಿವಮೊಗ್ಗ: ನಾಳೆಯಿಂದ ರಾಜ್ಯದಲ್ಲಿ ಷರತ್ತು ಬದ್ಧ ಮದ್ಯ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಿದ ಹಿನ್ನೆಲೆ ಮದ್ಯ ಮಾರಾಟ ಅಂಗಡಿ ಮಾಲೀಕರೊಂದಿಗೆ ಅಬಕಾರಿ ಉಪ ಆಯುಕ್ತರು ಸಭೆ ನಡೆಸಿ ಮಾರಾಟಗಾರರಿಗೆ ಸರ್ಕಾರದ ನಿಯಾಮವಳಿಗಳನ್ನು ತಿಳಿಸಿದ್ದಾರೆ.
ಶಿವಮೊಗ್ಗ: ಮದ್ಯ ಮಾರುವಾಗ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಕಾಪಾಡಲು ಸೂಚನೆ - ಕೊರೊನಾ ವೈರಸ್ ಭೀತಿ
ಕೊರೊನಾ ವೈರಸ್ ಭೀತಿ ಹಿನ್ನೆಲೆ ಕಳೆದ ಒಂದೂವರೆ ತಿಂಗಳಿಂದ ಮದ್ಯ ಮಾರಾಟ ಬಂದ್ ಮಾಡಲಾಗಿತ್ತು. ಆದರೆ ನಾಳೆಯಿಂದ ಷರತ್ತು ಬದ್ಧ ಮದ್ಯ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಿದೆ.
ಸಭೆಯಲ್ಲಿ ಕೆಲವು ಸೂಚನೆಗಳನ್ನು ನೀಡಿದ ಅವರು, ಮದ್ಯ ಮಾರಾಟಗಾರರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು, ಅಂಗಡಿಯಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಬಾಕ್ಸ್ಗಳನ್ನು ಹಾಕಬೇಕು ಹಾಗೂ ಯಾವುದೇ ಗಲಾಟೆಗಳು ಆದಲ್ಲಿ ವಿಡಿಯೋ ಚಿತ್ರೀಕರಣ ಮಾಡಬೇಕು ಎಂದಿದ್ದಾರೆ.
ಹಾಗೂ ಎಂಆರ್ಪಿಗಿಂತ ಹೆಚ್ಚಿನ ದರದಲ್ಲಿ ಮದ್ಯ ಮಾರಾಟ ಮಾಡುವುದು ಹಾಗೂ ನಿಯಮಾವಳಿಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಹಾಗೂ ಮದ್ಯ ಮಾರಾಟ ಅಂಗಡಿಯ ಪರವಾನಿಗೆಯನ್ನು ರದ್ದು ಮಾಡಲಾಗುವುದು ಎಂದು ಸೂಚನೆ ನೀಡಿದ್ದಾರೆ.