ಕರ್ನಾಟಕ

karnataka

ETV Bharat / state

ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಅನುದಾನದ ಶೇ.15ರಷ್ಟನ್ನು ಜೈನರು, ಸಿಖ್ಖರು, ಪಾರ್ಸಿಗಳು, ಮುಸ್ಲಿಮರು, ಕ್ರೈಸ್ತರು ಹಾಗೂ ಬೌದ್ಧರನ್ನು ಒಳಗೊಂಡ ಅಲ್ಪಸಂಖ್ಯಾತ ಸಮುದಾಯದ ಜನರ ಅಭಿವೃದ್ಧಿಗಾಗಿ ಮೀಸಲಿರಿಸಿ ಅನುಷ್ಟಾನಗೊಳಿಸಲು ಸರ್ಕಾರ ಆದೇಶ ಹೊರಡಿಸಿದೆ.

ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಸಭೆ

By

Published : Jun 18, 2019, 6:04 PM IST

ಶಿವಮೊಗ್ಗ : ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿಯಲ್ಲಿ ವಿವಿಧ ಇಲಾಖೆಗಳಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಜಾರಿಗೊಳಿಸಲಾಗಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಿ. ಶೇ.15ರಷ್ಟನ್ನು ಜೈನರು, ಸಿಖ್ಖರು, ಪಾರ್ಸಿಗಳು, ಮುಸ್ಲಿಮರು, ಕ್ರೈಸ್ತರು ಹಾಗೂ ಬೌದ್ಧರನ್ನು ಒಳಗೊಂಡ ಅಲ್ಪಸಂಖ್ಯಾತ ಸಮುದಾಯದ ಜನರ ಅಭಿವೃದ್ಧಿಗಾಗಿ ಮೀಸಲಿರಿಸಿ ಅನುಷ್ಟಾನಗೊಳಿಸಲು ಸರ್ಕಾರ ಆದೇಶ ಹೊರಡಿಸಿದೆ.

ಆದ್ರೆ ಕೆಲವು ಇಲಾಖೆಗಳಲ್ಲಿ ಅಲ್ಪಸಂಖ್ಯಾತರಿಗಾಗಿ ನಿಗದಿಪಡಿಸಿದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಿಲ್ಲ. ಅರ್ಜಿಗಳು ಬಂದಿಲ್ಲ ಎಂಬ ನೆಪಹೇಳದೆ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಿ ಅನುಷ್ಟಾನಗೊಳಿಸಬೇಕು ಎಂದರು.

ಶಿಕ್ಷಣ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೃಷಿ ಇಲಾಖೆ, ಕಾರ್ಮಿಕ ಇಲಾಖೆ, ತೋಟಗಾರಿಕಾ ಇಲಾಖೆ, ಪಶುಪಾಲನಾ ಮತ್ತು ಪಶು ಸಂಗೋಪನಾ ಇಲಾಖೆ, ಮೀನುಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಳಚೆಗೇರಿ ಅಭಿವೃದ್ಧಿ ಮಂಡಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಸತಿ ಯೋಜನೆಗಳು ಸೇರಿದಂತೆ ಪ್ರಮುಖ ಇಲಾಖೆಗಳಲ್ಲಿ ಅಲ್ಪಸಂಖ್ಯಾತರಿಗಾಗಿ ಪ್ರತ್ಯೇಕ ನಿಧಿಯನ್ನು ಮೀಸಲಿರಿಸಲಾಗಿದ್ದು, ಕಾಲಮಿತಿಯ ಒಳಗಾಗಿ ಅನುಷ್ಟಾನಗೊಳಿಸಬೇಕು ಎಂದು ಸ್ಪಷ್ಟಪಡಿಸಿದರು.

ಕೃಷಿ ಇಲಾಖೆಯಲ್ಲಿ ಕಳೆದ ಸಾಲಿನಲ್ಲಿ ಅಲ್ಪಸಂಖ್ಯಾತರಿಗಾಗಿ ರಾಜ್ಯ ವಲಯದಲ್ಲಿ 1.97ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದ್ದು, ಕೇವಲ 62 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಕೃಷಿ ಯಾಂತ್ರೀಕರಣದಲ್ಲಿ ಶೇ.9ರಷ್ಟು, ಕೃಷಿ ಸಂಸ್ಕರಣಾ ಘಟಕದಲ್ಲಿ ಶೇ. 3ರಷ್ಟು, ಸೂಕ್ಷ್ಮ ನೀರಾವರಿ ಯೋಜನೆಯಡಿ ಕೇವಲ ಶೇ. 3ರಷ್ಟು ಪ್ರಗತಿ ಸಾಧಿಸಲಾಗಿದ್ದು, ಒಟ್ಟಾರೆಯಾಗಿ ಶೇ. 6ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ.

ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಸಭೆ

ಇದೇ ರೀತಿ ಜಿಲ್ಲಾ ವಲಯದಲ್ಲಿ ಶೇ.3ರಷ್ಟು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಶೇ.4ರಷ್ಟು ಮಾತ್ರ ಪ್ರಗತಿ ಇದೆ. ತೋಟಗಾರಿಕಾ ಇಲಾಖೆಯಲ್ಲಿ ಕಳೆದ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಡಿ 18.95ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕೇವಲ 26ಲಕ್ಷ ರೂ. ವೆಚ್ಚ ಮಾಡಲಾಗಿದೆ. ರಾಜ್ಯ ಯೋಜನೆಯಡಿ 3.11ಕೋಟಿ ರೂ. ಬಿಡುಗಡೆಯಾಗಿದ್ದು 18ಲಕ್ಷ ರೂ. ವೆಚ್ಚವಾಗಿದೆ.

ವಿವಿಧ ಇಲಾಖೆಗಳಗೆ ಬಿಡುಗಡೆಯಾದ ಮೊತ್ತ ಮತ್ತು ವೆಚ್ಚ

  • ಜಿಲ್ಲಾ ಯೋಜನೆಯಡಿ 91ಲಕ್ಷ ರೂ. ಬಿಡುಗಡೆಯಾಗಿದ್ದು 5ಲಕ್ಷ ರೂ. ವೆಚ್ಚ ಮಾಡಲಾಗಿದೆ.
  • ಮೀನುಗಾರಿಕಾ ಇಲಾಖೆಯಲ್ಲಿ ಒಟ್ಟು 12.80ಲಕ್ಷ ರೂ. ಬಿಡುಗಡೆಯಾಗಿದ್ದು, 1.80ಲಕ್ಷ ರೂ. ವೆಚ್ಚ ಮಾಡಲಾಗಿದೆ.
  • ರೇಷ್ಮೆ ಇಲಾಖೆಯಲ್ಲಿ 69ಲಕ್ಷ ರೂ. ಬಿಡುಗಡೆಯಾಗಿದ್ದು, 3.54ಲಕ್ಷ ರೂ. ವೆಚ್ಚ ಮಾಡಲಾಗಿದೆ.
  • ಜಿಲ್ಲಾ ಕೈಗಾರಿಕಾ ಕೇಂದ್ರದ ಅಡಿಯಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನೆ ಯೋಜನೆಯಡಿ 40 ಭೌತಿಕ ಗುರಿ ಇದ್ದು ಕೇವಲ 5 ಗುರಿ ಸಾಧಿಸಲಾಗಿದೆ. ಈ ಅವಧಿಯಲ್ಲಿ 1ಕೋಟಿ ರೂ. ಗುರಿ ನಿಗದಿಪಡಿಸಲಾಗಿದ್ದು, 9.76ಲಕ್ಷ ರೂ. ವೆಚ್ಚಮಾಡಲಾಗಿದೆ.
  • ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನೆ ಯೋಜನೆಯಡಿ 43 ಭೌತಿಕ ಗುರಿ ಇದ್ದು ಕೇವಲ 2 ಗುರಿ ಸಾಧಿಸಲಾಗಿದೆ. 1.20 ಕೋಟಿ ರೂ. ಗುರಿ ನಿಗದಿ ಪಡಿಸಲಾಗಿದ್ದು 2.90 ಲಕ್ಷ ರೂ. ವೆಚ್ಚ ಮಾಡಲಾಗಿದೆ.

ಯೋಜನೆಗಳ ಬಗ್ಗೆ ಅಲ್ಪಸಂಖ್ಯಾತ ಸಮುದಾಯದಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಇಲಾಖೆ ವತಿಯಿಂದ ಮಾಡಬೇಕು. ನಿಗದಿತ ಗುರಿಯನ್ನು ಸಾಧಿಸದೇ ಇರುವ ಇಲಾಖೆಗಳು ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಂಗಸ್ವಾಮಿ, ಅಲಸ್ಪಂಖ್ಯಾತ ಕಲ್ಯಾಣ ಅಧಿಕಾರಿ ಧರ್ಮಪ್ಪ ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details