ಕರ್ನಾಟಕ

karnataka

ETV Bharat / state

ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ - Development of Jog falls as an international tourist destination

ಜೋಗ ಜಲಪಾತವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿ ರೂಪಿಸಲು ಯೋಜನೆ ರೂಪಿಸಲಾಗುತ್ತಿದೆ. ಈ ವಿಚಾರವಾಗಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅಧಿಕಾರಿಗಳ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ.

Jog Falls
ಜೋಗ ಜಲಪಾತ

By

Published : Sep 9, 2020, 10:33 PM IST

ಶಿವಮೊಗ್ಗ:ವಿಶ್ವ ವಿಖ್ಯಾತ ಜೋಗ ಜಲಪಾತದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಈಗಾಗಲೇ 120 ಕೋಟಿ ರೂ. ಅನುಮೋದನೆ ನೀಡಿದ್ದು, ಎಲ್ಲಾ ಮೂಲಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಜೋಗವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿ ರೂಪಿಸಬೇಕಾಗಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಜೋಗ ಅಭಿವೃದ್ಧಿಗೆ ನೀಲ ನಕಾಶೆ ರೂಪಿಸುವ ಕುರಿತು ಜೋಗದಲ್ಲಿ ಇಂದು ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಜೋಗದಲ್ಲಿ ಪ್ರವಾಸಿಗರು ಕನಿಷ್ಟ ಒಂದು ಇಡೀ ದಿನ ರಜಾದಿನ ಆಸ್ವಾದಿಸಲು ಅವಕಾಶ ಕಲ್ಪಿಸಬೇಕಾಗಿದೆ. ಈಗಿರುವ ಸೌಲಭ್ಯಗಳನ್ನು ಉತ್ತಮಪಡಿಸುವ ಜೊತೆಗೆ ಇನ್ನಷ್ಟು ಹೊಸ ಸೌಲಭ್ಯಗಳನ್ನು ಒದಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಮಾತ್ರವಲ್ಲದೆ ಕೆಪಿಟಿಸಿಎಲ್ ಪಾತ್ರವೂ ಬಹಳ ಮುಖ್ಯವಾಗಿದೆ. ಜೋಗ ಅಭಿವೃದ್ಧಿ ನಿಟ್ಟಿನಲ್ಲಿ ಇದು ಎರಡನೇ ಸಭೆಯಾಗಿದ್ದು, ತಜ್ಞರ ಸಲಹೆಗಳನ್ನು ಪಡೆದು ಆದಷ್ಟು ಬೇಗನೆ ನೀಲ ನಕಾಶೆ ಅಂತಿಮಗೊಳಿಸಿ ಟೆಂಡರ್ ಕರೆಯುವ ಪ್ರಕ್ರಿಯೆಯನ್ನು ಆರಂಭಿಸಬೇಕಾಗಿದೆ ಎಂದರು.

ಬಿ.ವೈ.ರಾಘವೇಂದ್ರ ಸಭೆ

ಇಲ್ಲಿನ 22 ಎಕರೆ ಪ್ರದೇಶದಲ್ಲಿ ವೀಕ್ಷಣಾ ಗೋಪುರ, ಕಾರಂಜಿಗಳ ನಿರ್ಮಾಣ, ವಿಶ್ರಾಂತಿ ಗೃಹಗಳು, ಉದ್ಯಾನವನ, ವಿದ್ಯುದಾಗಾರಕ್ಕೆ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ, ಮಳೆಗಾಲ ಹೊರತುಪಡಿಸಿ ಪ್ರತಿ ಶನಿವಾರ ಮತ್ತು ಭಾನುವಾರ ಜಲಪಾತಕ್ಕೆ ನೀರು ಹರಿಸುವ ಪ್ರಸ್ತಾವನೆಗಳಿಗೆ ಅಂತಿಮ ರೂಪು ನೀಡಬೇಕಾಗಿದೆ ಎಂದರು.

ಹಿರಿಯ ಅಧಿಕಾರಿಗಳ ಸಭೆ

ಕೆಪಿಟಿಸಿಲ್ ಮ್ಯಾನೇಜಿಂಗ್ ಡೈರೆಕ್ಟರ್ ಪೊನ್ನುರಾಜ್ ಮಾತನಾಡಿ, ಜೋಗದಲ್ಲಿ ಕೆಪಿಟಿಸಿಎಲ್‍ಗೆ ಸೇರಿದ ಹಲವು ಆಸ್ತಿಪಾಸ್ತಿಗಳಿವೆ. ಪ್ರವಾಸೋದ್ಯಮಕ್ಕೆ ಪೂರಕವಾಗಿ ಪವರ್ ಸ್ಟೇಷನ್, ಆಸ್ಪತ್ರೆ ಇತ್ಯಾದಿ ಕಟ್ಟಡಗಳನ್ನು ಬಳಸಿಕೊಳ್ಳಬಹುದಾಗಿದ್ದು, ಕೆಪಿಟಿಸಿಎಲ್ ಎಲ್ಲಾ ಸಹಕಾರ ನೀಡಲಿದೆ ಎಂದು ಹೇಳಿದರು.

ABOUT THE AUTHOR

...view details