ಕರ್ನಾಟಕ

karnataka

ETV Bharat / state

ಅನಾನಸು ಜೊತೆಗೆ ಇತರ ಬೆಳೆ ನಾಶದ ಬಗ್ಗೆಯೂ ಸಿಎಂ ಜೊತೆ ಚರ್ಚೆ: ಕೃಷಿ ಸಚಿವ - ಕೃಷಿ ಸಚಿವ ಬಿ.ಸಿ. ಪಾಟೀಲ್

ಜಿಲ್ಲೆಯಲ್ಲಿ ಸುಮಾರು 20 ಸಾವಿರ ಟನ್ ಅನಾನಸ್ ಬೆಳೆ ನಾಶವಾಗುತ್ತಿದೆ. ಶುಂಠಿ ಸಂಸ್ಕರಣಾ ಘಟಕಗಳು ಸ್ಥಗಿತವಾಗಿವೆ. ಈ ಕುರಿತು ಮುಂದಿನ ವಾರ ಸಿಎಂ ಜೊತೆ ಚರ್ಚೆ ನಡೆಸಲಾಗುವುದು- ಸಚಿವ ಬಿ.ಸಿ.ಪಾಟೀಲ್

ಬಿ.ಸಿ. ಪಾಟೀಲ್
ಬಿ.ಸಿ. ಪಾಟೀಲ್

By

Published : Apr 10, 2020, 5:18 PM IST

Updated : Apr 10, 2020, 6:34 PM IST

ಶಿವಮೊಗ್ಗ: ಲಾಕ್​​ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅನಾನಸ್ ಹಾಗೂ ಶುಂಠಿ ಸೇರಿದಂತೆ ಇತರ ಬೆಳೆಗಳು ನಾಶವಾಗಿರುವ ಕುರಿತು ಸಿಎಂ ಯಡಿಯೂರಪ್ಪ ಜೊತೆ ಚರ್ಚಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಶಿವಮೊಗ್ಗದ ಜಿಲ್ಲಾ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲಾಕ್​​ಡೌನ್ ನಂತರ ಕೃಷಿ ಕ್ಷೇತ್ರದ ಸಮಸ್ಯೆಗಳನ್ನು ಅರಿಯಲು ನಾನು ಜಿಲ್ಲಾ ಪ್ರವಾಸ ಮಾಡುತ್ತಿದ್ದೇನೆ. ಅದರಂತೆ ಶಿವಮೊಗ್ಗದಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾಗಿ ಅವರು ತಿಳಿಸಿದರು.

ಕೃಷಿ ಸಚಿವ ಬಿ.ಸಿ.ಪಾಟೀಲ್

ಜಿಲ್ಲೆಯಲ್ಲಿ ಕೃಷಿಗೆ ಪೂರಕವಾದ ವಸ್ತುಗಳು ರೈತರಿಗೆ ಸಿಗುವಂತೆ ಮಾಡಬೇಕು. ಕೃಷಿ ಚಟುವಟಿಕೆಗಳು‌ ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಸೂಚಿಸಿರುವುದಾಗಿ ಅವರು ಹೇಳಿದರು.

ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಟ್ರ್ಯಾಕ್ಟರ್ ರಿಪೇರಿ ಮಾಡಲು ಗ್ಯಾರೇಜ್ ತೆರೆಯುವಂತೆ ತಿಳಿಸಿದರು.

Last Updated : Apr 10, 2020, 6:34 PM IST

ABOUT THE AUTHOR

...view details