ಶಿವಮೊಗ್ಗ: ದೆಹಲಿಯ ನಿಜಾಮುದ್ದೀನ್ ಸಭೆಯಲ್ಲಿ ಭಾಗಿಯಾದವರ ಬಗ್ಗೆ ಜಿಲ್ಲಾಡಳಿತ ಮಾಹಿತಿ ಪರಿಶೀಲನೆ ನಡೆಸುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ನಿಜಾಮುದ್ದೀನ್ ಸಭೆಯಲ್ಲಿ ಭಾಗಿಯಾದವರ ಬಗ್ಗೆ ಜಿಲ್ಲಾಡಳಿತದಿಂದ ಪರಿಶೀಲನೆ: ಶಿವಮೊಗ್ಗ ಡಿಸಿ - ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಲೆಟೆಸ್ಟ್ ನ್ಯೂಸ್
ದೆಹಲಿಯ ನಿಜಾಮುದ್ದೀನ್ ಸಭೆಯಲ್ಲಿ ಭಾಗಿಯಾದವರ ಬಗ್ಗೆ ರಾಜ್ಯ ಸರ್ಕಾರ ಪ್ರಾಥಮಿಕ ಮಾಹಿತಿ ನೀಡಿದೆ. ಅದರ ಮೇಲೆ ಮಾಹಿತಿ ಪಡೆದು ಅಂತಹವರನ್ನು ಕ್ವಾರಂಟೈನ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಕೆ.ಬಿ.ಶಿವಕುಮಾರ್, ಜಿಲ್ಲಾಧಿಕಾರಿ
ಕೆ.ಬಿ.ಶಿವಕುಮಾರ್, ಜಿಲ್ಲಾಧಿಕಾರಿ
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ರಾಜ್ಯ ಸರ್ಕಾರ ಪ್ರಾಥಮಿಕ ಮಾಹಿತಿ ನೀಡಿದೆ. ಅದರ ಮೇಲೆ ಮಾಹಿತಿ ಪಡೆದು ಅಂತಹವರನ್ನು ಕ್ವಾರಂಟೈನ್ ಮಾಡಲಾಗುವುದು. ಮೊದಲು ಅವರ ಆರೋಗ್ಯ ತಪಾಸಣೆ ನಡೆಸಿ ಬಳಿಕ ಅವರ ಜೊತೆ ಸಂಪರ್ಕದಲ್ಲಿದವರನ್ನು ಸಹ ಕ್ವಾರಂಟೈನ್ ಮಾಡಲಾಗುವುದು ಎಂದರು.
ಇನ್ನು ಓರ್ವ ವ್ಯಕ್ತಿಯ ಬಗ್ಗೆ ಸಂಪೂರ್ಣ ನಿರ್ಣಾಯಕ ಮಾಹಿತಿ ಹೊರ ಬಾರದೆ ತಿಳಿಸುವುದು ಸರಿಯಲ್ಲ. ಈ ಕುರಿತು ನಾಳೆ ವರದಿ ನೀಡಲಾಗುವುದು ಎಂದರು.