ಶಿವಮೊಗ್ಗ:ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ, ಪಕ್ಷದ ಪ್ರಮುಖ ನಾಯಕರು ಸುಷ್ಮಾ ಸ್ವರಾಜ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿಸುವ ಮೂಲಕ ಸಂತಾಪ ಸೂಚಿಸಿದರು.
ಈ ವೇಳೆ ಮಾತಾನಾಡಿದ ಶಾಸಕ ಕೆ.ಎಸ್.ಈಶ್ವರಪ್ಪ, ಸುಷ್ಮಾ ಸ್ವರಾಜ್ ಅವರು ಮಹಿಳೆಯಾಗಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದರು. ಅವರು ಪಕ್ಷವನ್ನು ಸಹ ಅಷ್ಟೆ ಚೆನ್ನಾಗಿ ಮುನ್ನಡೆಸಿಕೊಂಡು ಹೋಗಿದ್ರು. ಅವರು ಮಂತ್ರಿಯಾಗಿ, ಸಿಎಂ ಆಗಿ, ವಿದೇಶಾಂಗ ಸಚಿವೆಯಾಗಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಅಲ್ಲದೇ, ತಮಗೆ ವಹಿಸಿದ ಜವಾಬ್ದಾರಿಯನ್ನು ಅಷ್ಟೆ ಚೆನ್ನಾಗಿ ನಿಭಾಯಿಸಿದ್ದಾರೆ. ಅವರು ನಮ್ಮಂತಹ ಸಾವಿರಾರು ಕಾರ್ಯಕರ್ತರಿಗೆ ಮಾರ್ಗದರ್ಶಕರಾಗಿದ್ದರು. ಅವರು ಬಳ್ಳಾರಿಗೆ ಬಂದು ಚುನಾವಣೆ ಎದುರಿಸಬೇಕು ಎಂದು ಹೇಳಿದಾಗ ಪಕ್ಷದ ಕಟ್ಟಾಳುವಿನಂತೆ ಚುನಾವಣೆ ಎದುರಿಸಿ, ಆ ಭಾಗದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ್ದರು. ಅವರ ಅಗಲಿಕೆ ನಮಗೆ ತೀವ್ರ ನೋವುಂಟು ಮಾಡಿದೆ. ನಮ್ಮ ತಾಯಿ ಕಳೆದುಕೊಂಡಷ್ಟೇ ದುಃಖವಾಗಿದೆ. ಅವರ ಆತ್ಮಕ್ಕೆ ಸಿಗಲಿ ಎಂದರು.