ಶಿವಮೊಗ್ಗ: ಗಾಜನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರಂಭಿಸಲಾಗಿರುವ ಕೋವಿಡ್ ಕೇರ್ ಸೆಂಟರ್ಗೆ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ಭೇಟಿ ನೀಡಿದರು.
ಕೋವಿಡ್ ಕೇರ್ ಸೆಂಟರ್ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್.. - Gazanur Morarji Desai Residential School
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 250 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ಮಾಡಲಾಗಿದೆ. ಲಕ್ಷಣ ರಹಿತ ಸೋಂಕಿತರನ್ನು ಅಲ್ಲಿಗೆ ಸೇರಿಸಲಾಗುತ್ತದೆ. ಈಗಾಗಲೇ ಕೋವಿಡ್ ಕೇರ್ ಸೆಂಟರ್ನಲ್ಲಿ 33 ಜನರನ್ನು ಸೇರಿಸಲಾಗಿದೆ. ಇಂದು ಮತ್ತೆ 30 ಜನ ಅಲ್ಲಿಗೆ ದಾಖಲಾಗಲಿದ್ದಾರೆ..
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸದಾಗಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಗಾಜನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 250 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ಮಾಡಲಾಗಿದೆ. ಲಕ್ಷಣ ರಹಿತ ಸೋಂಕಿತರನ್ನು ಅಲ್ಲಿಗೆ ರವಾನಿಸಲಾಗುತ್ತದೆ. ಈಗಾಗಲೇ ಕೋವಿಡ್ ಕೇರ್ ಸೆಂಟರ್ನಲ್ಲಿ 33 ಜನರನ್ನು ಸೇರಿಸಲಾಗಿದೆ. ಇಂದು ಮತ್ತೆ 30 ಜನ ಅಲ್ಲಿಗೆ ದಾಖಲಾಗಲಿದ್ದಾರೆ ಎಂದರು.
ಇದರಿಂದ ಗಂಭೀರವಾಗಿರುವ ರೋಗಿಗಳಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ ಎಂದರು. ಹಾಗಾಗಿ ಅಲ್ಲಿಗೆ ಭೇಟಿ ನೀಡಿ ವೈದ್ಯರೊಂದಿಗೆ ಚರ್ಚಿಸಿ ಬಂದಿರುವುದಾಗಿ ತಿಳಿಸಿದರು.