ಶಿವಮೊಗ್ಗ:ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಳೆದ ವಾರ ಶಿಕಾರಿಪುರದ ಜೆಡಿಎಸ್ ಮುಖಂಡ ಹೆಚ್ ಟಿ ಬಳಿಗಾರ್ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಈಗ ಮಾಜಿ ಸಂಸದ ಕೆ ಜಿ ಶಿವಪ್ಪ ಅವರ ಸುಪುತ್ರ ಕೆ ಎಸ್ ಪ್ರಶಾಂತ್ ಅವರು ಸಂಘ ಪರಿವಾರವಾದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ.
ಇಂದು ಶಿವಮೊಗ್ಗದಲ್ಲಿ ಹಿಂದೂ ಜಾಗರಣಾ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ತ್ರೈವಾರ್ಷಿಕ ಪ್ರಾಂತ ಸಮ್ಮೇಳನದ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಪ್ರಶಾಂತ್ ಅವರು ಬಿಜೆಪಿ ಸೇರ್ಪಡೆ ಖಚಿತವಾದಂತೆ ಆಗಿದೆ. ಪ್ರಶಾಂತ್ ಅವರಿಗೆ ಸಾಗರ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಅವಕಾಶ ಸಿಗಲಿದೆಯೇ? ಎಂಬ ಕುತೂಹಲ ಕೆರಳಿದೆ.