ಶಿವಮೊಗ್ಗ:ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಂತ್ರಸ್ತ ಯುವತಿ ವಿಡಿಯೋ ಮಾಡಿ ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡಿದ್ದಳು. ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನಾನು ಆ ವಿಡಿಯೋ ನೋಡಿಲ್ಲ. ಈ ಬಗ್ಗೆ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಇನ್ನೂ ಆ ವಿಡಿಯೋ ನೋಡಿಲ್ಲ. ಇವತ್ತು ಬೆಳಿಗ್ಗೆ ಪತ್ರಿಕೆಗಳಲ್ಲಿ ಈ ವಿಚಾರದ ಕುರಿತಾಗಿ ಓದಿದ್ದೇನೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ. ತನಿಖೆ ನಡೆಯುವ ವೇಳೆ ನಾನು ಆ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.
ಇದನ್ನೂ ಓದಿ: ಸಾಹುಕಾರ್ ವಿರುದ್ಧ ದಾಖಲಾಗುತ್ತಾ ಎಫ್ಐಅರ್?: ಮತ್ತೆ ಐವರನ್ನು ವಿಚಾರಣೆಗೆ ಕರೆದ ಎಸ್ಐಟಿ