ಶಿವಮೊಗ್ಗ :ಕೊರೊನಾ ಸಾಂಕ್ರಾಮಿಕ ಸೋಂಕಿನ ಕುರಿತು ಜಿಲ್ಲೆಯ ಜನರು ಆತಂಕಪಡುವ ಅಗತ್ಯವಿಲ್ಲ, ಬದಲಾಗಿ ಎಚ್ಚರಿಕೆಯಿಂದಿರಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದ್ದಾರೆ.
ನೆಹರೂ ಯುವ ಕೇಂದ್ರ ಹಾಗೂ ಸ್ಪಂದನ ಟ್ರಸ್ಟ್ ತೀರ್ಥಹಳ್ಳಿ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಡಿಜಿಟಲ್ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯುವಕರೊಂದಿಗೆ ಸಮಾಲೋಚನೆ ನಡೆಸಿದರು. ಇತ್ತೀಚೆಗೆ ಸರ್ಕಾರವು ಪ್ರಕಟಿಸಿದ 4ನೇ ಮಾರ್ಗಸೂಚಿಯಂತೆ ಎಲ್ಲರೂ ತಮ್ಮ ಹಾಗೂ ಇತರರ ಸುರಕ್ಷತೆಗಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಬದುಕುವುದನ್ನು ರೂಢಿಸಿಕೊಳ್ಳಬೇಕು ಎಂದರು.