ಶಿವಮೊಗ್ಗ: ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಪ್ರತಿಭಟನೆ ನಡೆಸಿದೆ.
ಶಿವಮೊಗ್ಗ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಡಿಎಸ್ಎಸ್ ಪ್ರತಿಭಟನೆ
ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿಯಿಂದ ಹಣವಂತರು ಭೂಮಿ ಖರೀದಿಸುವುದು ಹೆಚ್ಚಾಗುತ್ತದೆ. ಇದರಿಂದ ಸಹಜವಾಗಿ ಕೃಷಿ ಭೂಮಿ ಕಡಿಮೆಯಾಗಿ ಆಹಾರದ ಕೊರತೆ ಉಂಟಾಗುತ್ತದೆ ಎಂದು ದಲಿತ ಸಂಘರ್ಷ ಸಮಿತಿ ಆತಂಕ ವ್ಯಕ್ತಪಡಿಸಿತು.
ಐಟಿ-ಬಿಟಿ ಕ್ಷೇತ್ರದಲ್ಲಿರುವವರಿಗೆ ಕೃಷಿ ಭೂಮಿಯನ್ನು ಖರೀದಿಸಲು ಭೂ ಸುಧಾರಣಾ ಕಾಯ್ದೆಯ ಕೆಲವು ಸೆಕ್ಷನ್ಗಳು ತಡೆಯಾಗಿದ್ದವು. ಆದ್ರೀಗ ಈ ಕಾಯ್ದೆಗೆ ತಿದ್ದುಪಡಿ ತರುವುದರಿಂದ ರೈತರಲ್ಲದವರಿಗೂ ಕೂಡಾ ಕೃಷಿ ಭೂಮಿಯನ್ನು ಖರೀದಿಸಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಇದರಿಂದ ಸಣ್ಣ ರೈತರು ಭೂಮಿ ಕಳೆದುಕೊಂಡು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಕಾರ್ಯಕರ್ತರು ಆತಂಕ ವ್ಯಕ್ತಪಡಿಸಿದರು.
ಇಷ್ಟೇ ಅಲ್ಲದೇ, ಹಣವಂತರು ಭೂಮಿ ಖರೀದಿಸುವುದು ಹೆಚ್ಚಾಗುತ್ತದೆ. ಇದರಿಂದ ಸಹಜವಾಗಿ ಕೃಷಿ ಭೂಮಿ ಕಡಿಮೆಯಾಗಿ ಆಹಾರದ ಕೊರತೆ ಉಂಟಾಗುತ್ತದೆ. ಹೀಗಾಗಿ ಈ ಕೂಡಲೇ ಈ ತಿದ್ದುಪಡಿಯನ್ನು ಕೈ ಬಿಡಬೇಕು ಎಂದು ಆಗ್ರಹಿಸಲಾಯಿತು.