ಶಿವಮೊಗ್ಗ:ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಇ-ತ್ಯಾಜ್ಯದ ನಿರ್ವಹಣೆ ಮತ್ತು ಸಂಸ್ಕರಣೆ ಕುರಿತಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ 'ಇ-ತ್ಯಾಜ್ಯದ ನಿರ್ವಹಣೆ' ಎಂಬ ಒಂದು ದಿನದ ಕಾರ್ಯಾಗಾರ ಸೆ. 7ರಂದು ಜೆಎನ್‌ಎನ್‌ಸಿಇ ಕಾಲೇಜಿನ ಎಂಬಿಎ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಜೆ.ಆರ್.ವಾಸುದೇವ ತಿಳಿಸಿದರು.
ಶಿವಮೊಗ್ಗದಲ್ಲಿ ಸೆ. 7ರಂದು ಇ-ತ್ಯಾಜ್ಯ ನಿರ್ವಹಣೆ ಕಾರ್ಯಾಗಾರ - E waste workshop
ನಗರದಲ್ಲಿ ಇ-ತ್ಯಾಜ್ಯ ನಿರ್ವಹಣೆ ಮತ್ತು ಸಂಸ್ಕರಣೆ ಕುರಿತಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ 'ಇ-ತ್ಯಾಜ್ಯದ ನಿರ್ವಹಣೆ' ಎಂಬ ಒಂದು ದಿನದ ಕಾರ್ಯಾಗಾರ ಅಯೋಜಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇ-ತ್ಯಾಜ್ಯವು ಮಾನವ ಕುಲಕ್ಕೆ ಹಾನಿಕಾರಕ. ಸಮಾಜ ಅಭಿವೃದ್ಧಿಯ ಕುರಿತು ಜಾಗೃತಿ ವಹಿಸುವ ಸಂಘವು ಇ-ತ್ಯಾಜ್ಯದ ನಿರ್ವಹಣೆ ಕುರಿತು ಕಾರ್ಯಾಗಾರ ಹಮ್ಮಿಕೊಂಡಿದೆ. ಇ-ತಾಜ್ಯದ ಕುರಿತು ಉತ್ಪಾದನೆ, ಮೇಲ್ವಿಚಾರಣೆ, ನಿಯಂತ್ರಣ ಮತ್ತು ಕಡಿಮೆಗೊಳಿಸುವಿಕೆ ಕುರಿತು ಜನರಲ್ಲಿ ಅವರಿವು ಮೂಡಿಸುವುದೇ ಈ ಕಾರ್ಯಾಗಾರದ ಉದ್ದೇಶ ಎಂದರು.
ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಕಾರ್ಯಾಗಾರ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್, ಎನ್‌ಇಎಸ್ ಕಾರ್ಯದರ್ಶಿ ಎಸ್.ಎನ್. ನಾಗರಾಜ್ ಆಗಮಿಸಲಿದ್ದಾರೆ. ಇ-ತ್ಯಾಜ್ಯ ಕ್ಷೇತ್ರದಲ್ಲಿ ಉನ್ನತಮಟ್ಟದಲ್ಲಿ ಪರಿಣಿತಿ ಹೊಂದಿರುವ ಡಾ. ಆರ್.ನಾಗೇಂದ್ರನ್, ಪ್ರೊ. ಎಸ್.ವಿ.ಕೃಷ್ಣಮೂರ್ತಿ, ಡಾ. ಗುಡದಪ್ಪ ಕಸಬಿ, ವೆಂಕಟರೆಡ್ಡಿ ಪಟೇಲ್ ಹಾಗೂ ಹರಿಪ್ರಸಾದ್ ಶೆಟ್ಟಿ ಇವರು ಉಪನ್ಯಾಸ ನೀಡಲಿದ್ದಾರೆ.