ಶಿವಮೊಗ್ಗ:ಪ್ರಾಥಮಿಕ ಶಾಲೆಯ 1ರಿಂದ 5ನೇ ತರಗತಿಗಳನ್ನು ಪುನಾರಂಭಿಸುವ ಬಗ್ಗೆ ಶೀಘ್ರದಲ್ಲಿಯೇ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಪಡೆದು ತೀರ್ಮಾನಿಸಲಾಗುವುದು. ಸಮಿತಿಯ ಮುಂದೆ ಈ ಬಗ್ಗೆ ವಿಷಯ ಮಂಡಿಸಲಾಗುತ್ತದೆ. ಈಗಾಗಲೇ 6 ರಿಂದ 9ನೇ ತರಗತಿಗಳನ್ನು ನಮ್ಮ ಶಿಕ್ಷಕರ ನಡೆಸುತ್ತಿರುವುದು ಸಂತಸ ತಂದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಪಠ್ಯಕ್ರಮ ಕಡಿಮೆ ಮಾಡುವ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ:
ಈಗಾಗಲೇ ತರಗತಿಗಳಲ್ಲಿ ಮಕ್ಕಳಿಗೆ ಬ್ರಿಡ್ಜ್ ಕೋರ್ಸ್ ಮಾಡಲಾಗುತ್ತಿದೆ. ಪಠ್ಯಕ್ರಮ ಪೂರ್ಣ ಮಾಡುವುದರಿಂದ ಮಕ್ಕಳಿಗೆ ಲಾಭವಾಗುತ್ತದೆ. ಈಗಾಗಲೇ ಮಕ್ಕಳು ಸಾಕಷ್ಟು ತರಗತಿಗಳನ್ನು ಕಳೆದುಕೊಂಡಿದ್ದಾರೆ. ಬ್ರಿಡ್ಜ್ ಕೋರ್ಸ್ ಹಾಗೂ ಮತ್ತೆ ಪಾಠ ಮಾಡಿದ್ದರೆ ಮುಂದೆ ಸಮಸ್ಯೆ ಆಗುತ್ತದೆ. ಪಠ್ಯಕ್ರಮ ಕಡಿಮೆ ಮಾಡುವ ಬಗ್ಗೆ ಇನ್ನೂ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ರಜೆ ಕಡಿಮೆ ಮಾಡಿ ಇನ್ನಷ್ಟು ತರಗತಿ ನಡೆಸಬಹುದಾ ಎಂಬ ಯೋಚನೆ ನಡೆಯುತ್ತಿದೆ. ಇದು ಯೋಚನೆ ಅಷ್ಟೇ, ಯಾವುದೇ ತೀರ್ಮಾನ, ಚರ್ಚೆ ನಡೆದಿಲ್ಲ. ಶಿಕ್ಷಕರ ಸಹಕಾರ ತೆಗೆದುಕೊಂಡು ಮಾಡುವ ಯೋಚನೆ ಇದೆ. ಅವಶ್ಯಕತೆ ಬಿದ್ದರೆ ಪಠ್ಯಕ್ರಮ ಕಡಿಮೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.