ಕರ್ನಾಟಕ

karnataka

ETV Bharat / state

ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ  ಕಾಮಗಾರಿಗಳ ಪರಿಶೀಲನೆ - ೠ100 ft. Circular Road

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್​​ ಈಶ್ವರಪ್ಪ ಹಾಗೂ ಸಂಸದ ಬಿ.ವೈ ರಾಘವೇಂದ್ರ ಶಿವಮೊಗ್ಗ ನಗರದ ಹಲವು ಕಾಮಗಾರಿಗಳ ಖುದ್ದು ಪರಿಶೀಲನೆ ನಡೆಸಿದರು. ನಗರದ ರೈಲು ನಿಲ್ದಾಣ ಸೇರಿ ಹಲವು ಭಾಗದಲ್ಲಿ ನೂತನ ರಸ್ತೆ ಕಾಮಗಾರಿ ಆರಂಭವಾಗಲಿದ್ದು, ಒಟ್ಟು 750 ಮೀಟರ್ ಸಿಮೆಂಟ್​​ ಕಾಂಕ್ರಿಟ್​ ಚತುಷ್ಪಥ ರಸ್ತೆಯ ಕಾಮಗಾರಿ ಪರಿಶೀಲಿಸಿದರು.

Eshwarappa goes  for inspection of works in Shimoga
ಶಿವಮೊಗ್ಗದಲ್ಲಿ ಕಾಮಗಾರಿಗಳ ಪರಿಶೀಲನೆಗೆ ಮುಂದಾದ ಉಸ್ತುವಾರಿ ಸಚಿವ ಈಶ್ವರಪ್ಪ

By

Published : May 15, 2020, 11:46 PM IST

ಶಿವಮೊಗ್ಗ:ನಗರದ ರೈಲ್ವೆ ಕಾಂಪೌಂಡ್‍ನಿಂದ ಹೊಸಪೇಟೆ - ಶಿವಮೊಗ್ಗ ರಸ್ತೆ ಸಂಪರ್ಕಿಸುವ 100 ಅಡಿ ವರ್ತುಲ ರಸ್ತೆ ಕಾಮಗಾರಿ ಸ್ಥಳ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ನಡೆಸಿದರು.

ರಸ್ತೆಯ ಎರಡು ಬದಿಯಲ್ಲಿ 750 ಮೀಟರ್ ಉದ್ದಕ್ಕೆ ಸಿಮೆಂಟ್ ಕಾಂಕ್ರೀಟ್ ಚತುಷ್ಪಥ ರಸ್ತೆ, ರಸ್ತೆಯ ಎರಡೂ ಬದಿಗಳಲ್ಲಿ ಬಾಕ್ಸ್ ಚರಂಡಿ ನಿರ್ಮಾಣ, ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ 100 ಮೀಟರ್ ಸಿಸಿ ರಸ್ತೆ ನಿರ್ಮಾಣ ಮತ್ತು ರೈಲ್ವೆ ನಿಲ್ದಾಣದಿಂದ ಹೊರಗೆ ಹೋಗಲು 400 ಮೀಟರ್ ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿ ಇದರಲ್ಲಿ ಸೇರಿದೆ.

ಶಿವಮೊಗ್ಗದಲ್ಲಿ ಕಾಮಗಾರಿಗಳ ಪರಿಶೀಲನೆಗೆ ಮುಂದಾದ ಉಸ್ತುವಾರಿ ಸಚಿವ ಈಶ್ವರಪ್ಪ

ರಸ್ತೆ ನಿರ್ಮಾಣಕ್ಕೆ ಅಡ್ಡಲಾಗಿರುವ ವಸತಿ ಗೃಹಗಳ ಭೂಸ್ವಾಧೀನಕ್ಕಾಗಿ ರೈಲ್ವೆ ಇಲಾಖೆಗೆ ಈಗಾಗಲೇ 2.36 ಕೋಟಿ ರೂ, ಪಾವತಿಸಲಾಗಿದ್ದು, ಸದರಿ ಕಟ್ಟಡಗಳನ್ನು ರೈಲ್ವೆ ಇಲಾಖೆ ಲೋಕೋಪಯೋಗಿ ಇಲಾಖೆ ಸ್ವಾಧೀನಕ್ಕೆ ನೀಡಿದೆ.

ಖಾಸಗಿ ಒಡೆತನದ ಒಟ್ಟು 14 ವಸತಿಗೃಹಗಳ ಭೂಸ್ವಾಧೀನ ಪ್ರಕ್ರಿಯೆಗಾಗಿ 3.78 ಕೋಟಿ ರೂ. ಪಾವತಿಸಲು ಉಪವಿಭಾಗಧಿಕಾರಿ ಅವರು ಸೂಚಿಸಿದ್ದು, ಈಗಾಗಲೇ 2.40ಕೋಟಿ ರೂ. ಪಾವತಿಸಲಾಗಿದೆ. ಇನ್ನುಳಿದ ಮೆಸ್ಕಾಂನ ಜಾಗದ ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅದನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಸಚಿವರು ತಿಳಿಸಿದರು.

ರಸ್ತೆ ನಿರ್ಮಾಣಕ್ಕೆ ಅಡ್ಡಲಾಗಿರುವ ವಿದ್ಯುತ್ ಕಂಬಗಳ ತೆರವು ಪ್ರಕ್ರಿಯೆ ಆರಂಭಿಸಬೇಕು. ಅದರಂತೆ ಯುಜಿಡಿ ಪೈಪ್‍ಲೈನ್ ಸ್ಥಳಾಂತರಿಸುವ ಕಾಮಗಾರಿಗೆ ಅಂದಾಜು ಪಟ್ಟಿಯಲ್ಲಿ 28 ಲಕ್ಷ ರೂ. ಒದಗಿಸಲಾಗಿದೆ. ನೀರು ಸರಬರಾಜು ಕೊಳವೆಗಳ ಸ್ಥಳಾಂತರಕ್ಕಾಗಿ 18.50 ಲಕ್ಷ ರೂ. ಪಾವತಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ಭೂಸ್ವಾಧೀನಗೊಂಡಿರುವ ರೈಲ್ವೆ ಇಲಾಖೆಯ ವಸತಿ ಗೃಹಗಳು ಮತ್ತು ಖಾಸಗಿ ವಸತಿ ಗೃಹ ಕಟ್ಟಡದ ನೆಲಸಮ ಮಾಡುವ ಕಾಮಗಾರಿ ಪ್ರಗತಿಯಲ್ಲಿದ್ದು, ನಿಗದಿತ ಅವಧಿಯ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಿ ವರ್ತುಲ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅವರು ಹೇಳಿದರು. ಈ ವೇಳೆ ಸ್ಥಳದಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details