ಶಿವಮೊಗ್ಗ:ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ನೀಡಿದ್ದು ಸರಿಯಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆಕ್ರೋಶದ ನುಡಿಗಳನ್ನಾಡಿದ್ದಾರೆ.
ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ನೀಡಿದ್ದು ಸರಿಯಲ್ಲ: ಹೆಚ್.ಎಸ್.ಸುಂದರೇಶ್ - ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದು ಸರಿಯಲ್ಲ
ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ನೀಡಿದ್ದು ಸರಿಯಲ್ಲ. ಆ ಘಟನೆ ವೈಯಕ್ತಿಕವಾದುದು. ಅದನ್ನು ರಾಜಕೀಯವಾಗಿ ಬಳಸಿಕೊಂಡು ಬೇಳೆ ಬೇಯಿಸಿಕೊಳ್ಳುವುದು ತರವಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಕಿಡಿ ಕಾರಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು, ಮೊನ್ನೆ ನಡೆದ ಘಟನೆ ವೈಯಕ್ತಿಕವಾದುದು. ಅದನ್ನು ರಾಜಕೀಯವಾಗಿ ಬಳಸಿಕೊಂಡು ಬೇಳೆ ಬೇಯಿಸಿಕೊಳ್ಳುವುದು ತರವಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾದ ನೀವು, ಪ್ರಚೋದನಾತ್ಮಕ ಹೇಳಿಕೆ ನೀಡುವ ಬದಲು, ಜನರಿಗೆ ಧೈರ್ಯ ಹೇಳುವ ಕೆಲಸ ಮಾಡಬೇಕಿತ್ತು. ಈಗಾಗಲೇ ಜನ ಲಾಕ್ಡೌನ್ನಿಂದ ತತ್ತರಿಸಿಹೋಗಿದ್ದಾರೆ. ಈ ಸಮಯದಲ್ಲಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವುದು ಸರಿಯಲ್ಲ. ಸಚಿವರು ಜವಾಬ್ದಾರಿಯಿಂದ ಮಾತನಾಡಬೇಕು. ಕೆಲವರು ವೈಯಕ್ತಿಕ ವಿಚಾರ ಬಳಸಿಕೊಂಡು ನಗರವನ್ನು ಬಂದ್ ಮಾಡಿಸಿದ್ದಾರೆ. ಈ ವಿಚಾರದಲ್ಲಿ ಪೊಲೀಸ್ ಇಲಾಖೆ ಉತ್ತಮ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು. ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಅಂಶ ಪ್ರಚಾರ ಮಾಡುವವರನ್ನು ಶಿಕ್ಷಿಸಬೇಕಿದೆ ಎಂದರು.
ಗ್ರಾಮ ಪಂಚಾಯ್ತಿ ಚುನಾವಣೆ ಎದುರಿಸಲು ಕಾಂಗ್ರೆಸ್, ಜಿಲ್ಲೆಯ ಮಾಜಿ ಮಂತ್ರಿ, ಹಾಲಿ ಎಂಎಲ್ಸಿ, ಮಾಜಿ ಶಾಸಕರು, ಜಿ.ಪಂ.ಸದಸ್ಯರನ್ನೊಳಗೊಂಡ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ ಎಂದರು.