ಶಿವಮೊಗ್ಗ:ನಗರ ಕ್ಷೇತ್ರದ ಶಾಸಕ ಕೆ ಎಸ್ ಈಶ್ವರಪ್ಪ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಪೂಜಿ ನಗರ, ಹೊಸಮನೆ, ವೆಂಕಟೇಶ್ ನಗರ ಸೇರಿದಂತೆ ಮಳೆಯಿಂದಾಗಿ ತೀರಾ ಹಾನಿಗೊಳಗಾದ ಬಡಾವಣೆಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದು, ತಕ್ಷಣ ಸೂಕ್ತ ಪರಿಹಾರದ ಭರವಸೆ ನೀಡಿದರು.
ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಭೇಟಿ.. ಪರಿಹಾರದ ಭರವಸೆ - ಮಳೆ ಹಾನಿ ಪ್ರದೇಶಗಳ ಪರಿಶೀಲನೆ
ಶಿವಮೊಗ್ಗದಲ್ಲಿ ತೀವ್ರ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಶಾಸಕ ಕೆ.ಎಸ್ ಈಶ್ವರಪ್ಪ ಮಳೆ ಹಾನಿ ಪ್ರದೇಶಗಳಿಗೆ ಹಾಗೂ ಮಳೆಯಿಂದಾಗಿ ಕುಸಿದು ಬಿದ್ದ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನಗರ ನೀಡಿದ ಶಾಸಕರು
ಅಲ್ಲದೇ, ನಗರದ ಬಾಪೂಜಿ ನಗರದಲ್ಲಿ ಮನೆಯೊಳಗೆ ನೀರು ನುಗ್ಗಲು ಕಾರಣವಾದ ರಾಜಕಾಲುವೆ ಸೇತುವೆ ತೆರವುಗೊಳಿಸಲಾಗಿದ್ದು, ಇದನ್ನು ಕೂಡ ಪರಿಶೀಲನೆ ನಡೆಸಿ, ಅಮೃತ್ ಯೋಜನೆಯಲ್ಲಿ ಸೇತುವೆ ಪುನರ್ ನಿರ್ಮಾಣದ ಭರವಸೆ ನೀಡಿದರು. ಮಳೆಯಿಂದಾಗಿ ಕುಸಿದು ಬಿದ್ದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಪಾಲಿಕೆಯ ವತಿಯಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.ಈ ವೇಳೆ ಉಪ ಮೇಯರ್ ಚನ್ನಬಸಪ್ಪ, ಮುರುಳಿಧರ್ ಸೇರಿ ಪಾಲಿಕೆ ಅಧಿಕಾರಿಗಳು ಹಾಜರಿದ್ದರು.