ಶಿವಮೊಗ್ಗ:ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನ ಮತ್ತು ನ್ಯಾಯಾಂಗ ಗೌರವಿಸಬೇಕು. ನ್ಯಾಯಾಲಯ ಈಗಾಗಲೇ ಶಾಲಾ, ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಪಾಲಿಸಬೇಕೆಂದು ಆದೇಶ ನೀಡಿದೆ. ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಶಿಕ್ಷಣದ ಕಡೆ ಹೆಚ್ಚಿನ ಗಮನ ಕೊಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದ ಬಗ್ಗೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
ಪಠ್ಯದಲ್ಲಿ ದೇಶ ಕಟ್ಟುವ ವಿಚಾರದ ಬಗ್ಗೆ ಸೇರಿಸಲಾಗಿದೆ. ಯಾವುದೇ ಪಠ್ಯವನ್ನು ತೆಗೆದಿಲ್ಲ. ದೇಶಕ್ಕೆ ಗೌರವ ಕೊಡುವುದರ ಬಗ್ಗೆ ಪಠ್ಯದಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಅನವಶ್ಯಕ ಚರ್ಚೆ ಬೇಡ. ಮಕ್ಕಳಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಕಾಂಗ್ರೆಸ್ ಮಾಡಿಕೊಂಡು ಬರುತ್ತಿದೆ. ಇದರ ಪುನರಾವರ್ತನೆ ಬೇಡ ಎಂದು ಬಿ.ವೈ. ರಾಘವೇಂದ್ರ ಹೇಳಿದರು.