ಕರ್ನಾಟಕ

karnataka

ETV Bharat / state

ಅಬಕಾರಿ ಇಲಾಖೆ ದಾಳಿ: 11 ಪ್ರಕರಣ, 5546 ಲೀಟರ್​​​​ ಮದ್ಯ  ವಶ, 7 ಜನರ ಬಂಧನ - ವಾಹನಗಳು ವಶ

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿದ ಅಬಕಾರಿ ಪೊಲೀಸರು ಅಕ್ರಮ ಮದ್ಯ, ವಾಹನಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.

ಅಬಕಾರಿ ಇಲಾಖೆ ದಾಳಿ

By

Published : Mar 15, 2019, 4:54 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಹಲವು ಕಡೆ ಅಬಕಾರಿ ಪೊಲೀಸರು ದಾಳಿ ನಡೆಸಿ ಹಲವರನ್ನು ಬಂಧಿಸಿದ್ದಾರೆ.

ಜಿಲ್ಲೆಯ ತೀರ್ಥಹಳ್ಳಿ, ಭದ್ರಾವತಿ, ಸಾಗರ, ಸೊರಬ, ಶಿಕಾರಿಪುರ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ ಅಬಕಾರಿ ಪೊಲೀಸರು, 32.27.701 ರೂ. ಮೌಲ್ಯದ 5.546 ಲೀಟರ್​​ ಮದ್ಯ ಹಾಗೂ 9.230 ಲೀಟರ್​​ ಬಿಯರ್ ಜೊತೆಗೆ ಒಂದು ಸ್ವಿಫ್ಟ್ ಕಾರು, 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಅಬಕಾರಿ ಇಲಾಖೆ ದಾಳಿ: ಅಕ್ರಮ ಮದ್ಯ ವಶ

ಇನ್ನು ಅಕ್ರಮ ಮದ್ಯ ಸಾಗಾಣಿಕೆಯಲ್ಲಿ ತೊಡಗಿಕೊಂಡಿದ್ದ 7 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ABOUT THE AUTHOR

...view details