ಕರ್ನಾಟಕ

karnataka

ETV Bharat / state

ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ: ದೂರು ದಾಖಲು - etv bharat kannada

ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ ತೆರೆಯಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಧು ಬಂಗಾರಪ್ಪ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ
ಮಧು ಬಂಗಾರಪ್ಪ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ

By ETV Bharat Karnataka Team

Published : Nov 27, 2023, 3:45 PM IST

ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ರಾಜಕೀಯ ನಾಯಕರು, ಪೊಲೀಸ್​ ಅಧಿಕಾರಿಗಳು, ಸಿನಿಮಾ ತಾರೆಗಳ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಶಿಕ್ಷಣ ಹಾಗೂ ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ ತೆರೆಯಲಾಗಿದೆ ಎಂದು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಚಾಲಕರಾದ ಜೆ.ಡಿ.ಮಂಜುನಾಥ್ ಎಂಬುವರು ಈ ಸಂಬಂಧ ದೂರು ದಾಖಲಿಸಿದ್ದಾರೆ.

"ಶ್ರೀ ಮಧು ಬಂಗಾರಪ್ಪ ಜೀ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು" ಎಂಬ ಹೆಸರಿನಲ್ಲಿ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆಯಲಾಗಿದೆ. ಇದರ ಡಿಪಿಗೆ ಮಧು ಬಂಗಾರಪ್ಪ ಅವರ ಫೋಟೊ ಹಾಕಿದ್ದಾರೆ.‌ ಈ ನಕಲಿ ಖಾತೆಗೆ 58 ಸಾವಿರ ಜನ ಫಾಲೋ ಮಾಡುತ್ತಿದ್ದಾರೆ. ಕುಂದಾಪುರ ವಿರಾಟ್ ಎಂಬ ಹೆಸರಿನ ಫೇಸ್​ಬುಕ್ ಬಳಕೆದಾರರು ಸದರಿ ಗ್ರುಪ್​​​ನಲ್ಲಿ ಇದ್ದಾರೆ. ಈ ನಕಲಿ ಫೇಸ್​ಬುಕ್ ಖಾತೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರುಗಳನ್ನು ಅವಹೇಳನ ಮಾಡಲಾಗುತ್ತಿದೆ. ಅಲ್ಲದೇ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಅಪಹಾಸ್ಯ ಮಾಡಲಾಗುತ್ತಿದೆ.

ಪೇಜ್​ನಲ್ಲಿ ಸಚಿವ ಮಧು ಬಂಗಾರಪ್ಪ ಅವರಂತೆ ನಟಿಸಿ, ಸಚಿವರೇ ಈ ರೀತಿ ಫೇಸ್ ಬುಕ್ ಅಕೌಂಟ್ ಕ್ರಿಯೇಟ್ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ನಾಯಕರು, ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅಪಹಾಸ್ಯ ಮಾಡಿ ಹಲವು ಪೋಸ್ಟ್ ಗಳನ್ನು ಹಾಕುತ್ತಿರುವಂತೆ ಬಿಂಬಿಸಲಾಗುತ್ತಿದೆ. ಈ ಮೂಲಕ ಸಚಿವರಿಗೆ ಕೆಟ್ಟ ಹೆಸರು ಬರುವಂತೆ, ಅವರ ಘನತೆಗೆ ಧಕ್ಕೆ ತರುವಂತೆ ಮಾಡಲಾಗುತ್ತಿದೆ. ಕೂಡಲೇ ಈ ಕುರಿತು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದೂರು ನೀಡಲಾಗಿದೆ. ಸಿಇಎನ್ ಪೊಲೀಸರು ದೂರು ಸ್ವೀಕರಿಸಿ ಹಿಂಬರಹ ನೀಡಿದ್ದಾರೆ.

ಹಿಂದಿನ ಪ್ರಕರಣಗಳು:ರಾಜ್ಯಪಾರ ಹೆಸರಿನಲ್ಲಿ ನಕಲಿ ಖಾತೆ:ಸೈಬರ್​ ವಂಚಕರು ರಾಜ್ಯಪಾಲರ ಹೆಸರಿನಲ್ಲಿ ನಕಲಿ ಫೇಸ್​​ಬುಕ್​ ಖಾತೆ ಸೃಷ್ಟಿಮಾಡಿದ್ದ ಘಟನೆ ಕೆಲ ದಿನಗಳ ಹಿಂದೆ ನಡೆದಿತ್ತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ರ ಫೋಟೋ, ಹೆಸರು ಬಳಸಿಕೊಂಡು ನಕಲಿ ಫೇಸ್‌ಬುಕ್ ಖಾತೆ ತೆರೆಯಲಾಗಿತ್ತು. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿತ್ತು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ಹೆಸರಿನಲ್ಲೂ ನಕಲಿ ವೆಬ್‌ಸೈಟ್‌:ರಾಜ್ಯಪಾಲರಾದ ಥಾವರ್ ಚೆಂದ್​ ಗೆಹ್ಲೋಟ್​ ಅವರ ಹೆಸರಿನಲ್ಲಿ ಇ​ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್‌ಸೈಟ್​ ಅನ್ನು ಮೂವರು ಸೃಷ್ಟಿಸಿದ್ದರು. ಆ ಮೂವರು ಆರೋಪಿಗಳನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ವೆಂಕಟೇಶ್, ಧರಣೇಶ್ ಹಾಗೂ ಸಿದ್ದಾರ್ಥ್ ಎಂದು ಗುರುತಿಸಲಾಗಿತ್ತು. ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ಸೃಷ್ಟಿಸಿ, ಅದರ ಮೂಲಕ ಕಾಂಗ್ರೆಸ್ ಪಕ್ಷ ಹಾಗೂ ಪಕ್ಷದ ನಾಯಕರಿಗೆ ಅಗೌರವ ತರುವಂತಹ ಹೇಳಿಕೆಗಳನ್ನು ಪ್ರಕಟಿಸಲಾಗುತ್ತಿದೆ ಎಂದು ಕೆಪಿಸಿಸಿ ಕಾನೂನು ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯ ಶತಭಾಷ್ ಶಿವಣ್ಣ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂ ಓದಿ:ಜಿಲ್ಲಾಡಳಿತದ ನಕಲಿ ಫೇಸ್​​ಬುಕ್​ ಖಾತೆ ತೆರೆದ ಖದೀಮರು: ಮೆಸೆಂಜರ್ ಮೂಲಕ ಹಣಕ್ಕೆ ಬೇಡಿಕೆ!

ABOUT THE AUTHOR

...view details