ಶಿವಮೊಗ್ಗ: ಸಾಲಬಾಧೆಯಿಂದಾಗಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಬಳಿಯ ಲಕ್ಕವಳ್ಳಿಯಲ್ಲಿ ನಡೆದಿದೆ.
ಸಾಲಭಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ - Farmer sucide in anandpura
ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನ ಲಕ್ಕವಳ್ಳಿಯಲ್ಲಿ ನಡೆದಿದೆ.
ಮೃತ ರೈತ
ಮಂಜುನಾಥ್(48) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ. ಜಮೀನಿಗೆ ಸಿಂಪಡಿಸಲು ತಂದಿದ್ದ ಔಷಧವನ್ನು ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಮೀನಿನಲ್ಲಿ ವಿಷ ಕುಡಿದು ಬಿದ್ದು ಒದ್ದಾಡುವಾಗ ಮನೆಯವರು ನೋಡಿ ಕೂಡಲೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್ ಸಾವನ್ನಪ್ಪಿದ್ದಾರೆ.
ಆತ್ಮಹತ್ಯೆಗೆ ಶರಣಾದ ರೈತ ಮಂಜುನಾಥ್ ಜಮೀನಿನ ಮೇಲೆ 5 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರು ಎನ್ನಲಾಗಿದೆ. ಈ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.