ಶಿವಮೊಗ್ಗ:ವಿದ್ಯುತ್ ತಂತಿ ತುಳಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ನಂಜವಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಶೇಷಗಿರಿ (45) ಎಂದು ಗುರುತಿಸಲಾಗಿದೆ.
ಇಂದು ತಮ್ಮ ನಿವಾಸದ ಎದುರು ಶೇಷಗಿರಿ ಪತ್ನಿ ಹೂವು ಕೀಳಲು ತೆರಳಿದ್ದರು. ಈ ವೇಳೆ ಪತ್ನಿಗೆ ವಿದ್ಯುತ್ ಸ್ಪರ್ಶಿಸಿ, ಕೂಗಿಕೊಂಡಿದ್ದಾರೆ. ಪತ್ನಿಯನ್ನು ರಕ್ಷಿಸಲು ಹೋದ ಪತಿ ವಿದ್ಯುತ್ ತಂತಿ ತುಳಿದು ಮೃತಪಟ್ಟಿದ್ದಾರೆ. ವಿದ್ಯುತ್ ತಂತಿ ತುಂಡಾಗಿ ಈ ಹಿಂದೆಯೇ ತಂತಿ ಬೇಲಿ ಮೇಲೆ ಬಿದ್ದಿತ್ತು. ಈ ಬಗ್ಗೆ ಮೃತ ಶೇಷಗಿರಿ ಮೂರು ಬಾರಿ ಮೆಸ್ಕಾಂನವರಿಗೆ ಫೋನ್ ಮಾಡಿ ಸರಿಪಡಿಸುವಂತೆ ಮನವಿ ಮಾಡಿಕೊಂಡಿದ್ದರಂತೆ.