ಶಿವಮೊಗ್ಗ:ತುಮಕೂರಿನಲ್ಲಿ ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ, ತೆರಳುತ್ತಿದ್ದ ರೈತರನ್ನು ವಶಕ್ಕೆ ಪಡೆದಿದ್ದು ಖಂಡನೀಯ. ಸಂಜೆಯೊಳಗೆ ರೈತರನ್ನು ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಒತ್ತಾಯಿಸಿದರು.
'ಪ್ರಧಾನಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ರೈತರನ್ನು ವಶಕ್ಕೆ ಪಡೆದಿದ್ದು ಖಂಡನೀಯ' - ತುಮಕೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮ
ಪ್ರಧಾನಿ ಮೋದಿಯವರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ರೈತರನ್ನು ವಶಪಡಿಸಿಕೊಂಡಿದ್ದು ಖಂಡನೀಯವೆಂದು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಹೇಳಿದರು.
ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಹೇಳಿಕೆ
ರೈತರು ಎಂದಿಗೂ ಹಿಂಸಾತ್ಮಕವಾಗಿ ಪ್ರತಿಭಟನೆ ಮಾಡಿಲ್ಲ. ರೈತ ಸಂಘ ಗಾಂಧೀಜಿಯವರ ವಿಚಾರಗಳ ಮೂಲಕ ಅಹಿಂಸಾ ಮಾರ್ಗದ ಮೂಲಕ ಪ್ರತಿಭಟನೆ ಮಾಡಿಕೊಂಡು ಬರುತ್ತಿದೆ ಎಂದರು. ಪ್ರಧಾನಿಯವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲು ಹೊರಟ ನಮ್ಮ ರೈತರನ್ನು ವಶಕ್ಕೆ ಪಡೆದಿರುವುದು ಸರಿಯಲ್ಲ. ನಮ್ಮ ಪ್ರತಿಭಟನೆಯ ಹಕ್ಕನ್ನು ಕಿತ್ತುಕೊಂಡಿದ್ದು, ನಾವು ಪ್ರಜಾಪ್ರಭುತ್ವ ದೇಶದಲ್ಲಿದ್ದೇವೆಯೋ ಅಥವಾ ಸರ್ವಾಧಿಕಾರಿ ಆಡಳಿತ ದೇಶದಲ್ಲಿದ್ದೇವೋ ಎಂಬುದು ಅರ್ಥ ಆಗುತ್ತಿಲ್ಲ ಎಂದರು. ಕೂಡಲೇ ರೈತರನ್ನು ಬಿಡುಗಡೆ ಮಾಡಬೇಕುಂದು ಒತ್ತಾಯಿಸಿದರು.