ಶಿವಮೊಗ್ಗ:ಮುಕ್ತ ವ್ಯಾಪಾರ ಒಪ್ಪಂದದ ವ್ಯಾಪ್ತಿಯಿಂದ ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ವ್ಯಾಪ್ತಿಯ ಶಿವಮೊಗ್ಗ ಹಾಲು ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಶಿಮೂಲ್ ಒಕ್ಕೂಟದಿಂದ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅಧ್ಯಕ್ಷರು, ನಿರ್ದೇಶಕರು, ನೌಕರರು ಹಾಗೂ ರೈತರು ಭಾಗಿಯಾಗಿದ್ದರು. ಪ್ರಧಾನಿ ಮೋದಿಯವರು ಎಫ್ಟಿಎ/ಆರ್ಸಿಇಪಿ ಒಪ್ಪಂದ ಮಾಡಿಕೊಂಡರೆ ವಿದೇಶಗಳಿಂದ ಕಳಪೆಮಟ್ಟದ ಹಾಲಿನ ಉತ್ಪನ್ನಗಳು ದೇಶಕ್ಕೆ ಅಮದು ಆಗುತ್ತವೆ.