ಕರ್ನಾಟಕ

karnataka

By

Published : Jun 20, 2020, 6:54 PM IST

ETV Bharat / state

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘದಿಂದ ಪ್ರತಿಭಟನೆ

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ರಾಜ್ಯ ರೈತ ಸಂಘದ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

farmers' union Protes
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘದಿಂದ ಪ್ರತಿಭಟನೆ

ಶಿವಮೊಗ್ಗ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಮಹಾವೀರ ವೃತ್ತದ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ರೈತರು, ರಾಜ್ಯದಲ್ಲಿ ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆ ಅನೇಕ ಕೂಲಿಗಾರರನ್ನು ರೈತರನ್ನಾಗಿ ಮಾಡಿತ್ತು. ಆದರೆ ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಾಡಲು ಹೊರಟಿದೆ. ಇದರಿಂದ ರೈತರು ಭೂಮಿ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಲಿದೆ. ರೈತರನ್ನು ರಾಜ್ಯ ಸರ್ಕಾರ ಬೀದಿಗೆ ತಳ್ಳಲು ನಿರ್ಧಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಹಾಗೂ ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಮುಂದಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details