ಶಿವಮೊಗ್ಗ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಯ ವತಿಯಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನವರಿಗೆ ಸನ್ಮಾನ ಮಾಡಲಾಯ್ತು.
ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ: ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ಸನ್ಮಾನ - ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಕಾಗೋಡು ತಿಮ್ಮಪ್ಪ ಪ್ರತಿಭಟನೆ
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಗೋಡಿನಲ್ಲಿ ಪ್ರತಿಭಟನೆ ನಡೆಸಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರಿಗೆ ಸನ್ಮಾನ ಮಾಡಲಾಯ್ತು.
ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ಸನ್ಮಾನ
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಗೋಡಿನಲ್ಲಿ ಪ್ರತಿಭಟನೆ ನಡೆಸಿದ್ದರು. ಹಾಗಾಗಿ ರೈತರ ಪರವಾಗಿ ಹಾಗೂ ಭೂ ಸುಧಾರಣಾ ಕಾಯ್ದೆಯ ವಿರುದ್ಧ ಹೋರಾಟ ಮಾಡುತ್ತಿರುವ ನಿಮ್ಮ ಜೊತೆಗೆ ನಾವಿದ್ದೇವೆ ನೀವೂ ನಮ್ಮೊಂದಿಗೆ ಇರಬೇಕು ಎಂದು ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಯ ಕಾರ್ಯಕರ್ತರು ಕಾಗೋಡು ತಿಮ್ಮಪ್ಪನವರ ಮನೆಗೆ ತೆರಳಿ ಸನ್ಮಾನ ಮಾಡಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ರಾಜ್ಯ ವರಿಷ್ಠ ಕೆ.ಟಿ ಗಂಗಾಧರ್, ಪ್ರಗತಿಪರ ಸಂಘಟನೆಯ ಸದಸ್ಯರಾದ ಶ್ರೀಪಾಲ್, ಗುರುಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.