ಶಿವಮೊಗ್ಗ:ರಂಗಕರ್ಮಿ, ಚಿತ್ರನಟ, ಪತ್ರಕರ್ತ ಹೀಗೆ ಬಹುಮುಖ ಪ್ರತಿಭೆಯಾಗಿದ್ದ ಮೈ.ನಾ. ಸುಬ್ರಮಣ್ಯ ಅವರು ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ.
63 ವರ್ಷದ ಮೈ.ನಾ. ಸುಬ್ರಮಣ್ಯ ಅವರಿಗೆ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ನಗರದ ಹೊರವಲಯದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದರು. ಇಂದು ಮಧ್ಯಾಹ್ನ 3 ಗಂಟೆಗೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇವರ ಇಬ್ಬರು ಹೆಣ್ಣು ಮಕ್ಕಳು ಟಿವಿ ಸೀರಿಯಲ್ ನಟರಾಗಿದ್ದಾರೆ.