ಶಿವಮೊಗ್ಗ :ಶಾರ್ಟ್ ಸರ್ಕ್ಯೂಟ್ನಿಂದ ಭಾರತೀಯ ಸ್ಟೇಟ್ ಬ್ಯಾಂಕ್( SBI) ಕಚೇರಿಯಲ್ಲಿರುವ ಪೀಠೋಪಕರಣ ಸೇರಿದಂತೆ ಮಹತ್ವದ ದಾಖಲೆಗಳು ಸುಟ್ಟು ಕರಕಲಾದ ಘಟನೆ ಶಿವಮೊಗ್ಗದ ವಿದ್ಯಾನಗರದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಸುಮಾರು 10 ಗಂಟೆಗೆ ಬ್ಯಾಂಕ್ನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ತಕ್ಷಣ ಸ್ಥಳೀಯರು ಅಗ್ನಿ ಶಾಮಕದಳದವರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಆದರೆ, ಈ ವೇಳೆಗಾಗಲೇ ಬ್ಯಾಂಕ್ನಲ್ಲಿದ್ದ ದಾಖಲಾತಿ ಪೇಪರ್ಗಳಿಗೂ ಬೆಂಕಿ ತಗುಲಿದ್ದರಿಂದ ಅವು ಸುಟ್ಟು ಭಸ್ಮವಾಗಿವೆ.