ಶಿವಮೊಗ್ಗ:ನಗರದ ಜಿಎಸ್ಕೆಎಂ ರಸ್ತೆಯಲ್ಲಿರುವ ಪಿಡಬ್ಲೂಡಿ ಕ್ವಾಟ್ರಸ್ನಲ್ಲಿ ವ್ಯಕ್ತಿಯೊಬ್ಬರಿಗೆ ಸೋಂಕು ಕಾಣಿಸಿಕೊಂಡಿದ್ದು, ಆ ಬಡಾವಣೆಯ ಒಂದು ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಈತ ಕಳೆದೆರಡು ದಿನಗಳ ಹಿಂದೆಯಷ್ಟೇ ಬೆಂಗಳೂರಿನಿಂದ ಆಗಮಿಸಿದ್ದ ಎಂದು ತಿಳಿದು ಬಂದಿದೆ. ಈತನ ಟ್ರಾವೆಲ್ ಹಿಸ್ಟರಿಯನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಕಲೆಹಾಕುತ್ತಿದ್ದಾರೆ.
ತೀರ್ಥಹಳ್ಳಿ ಪಟ್ಟಣದಲ್ಲಿ ಮೊದಲ ಪ್ರಕರಣ ದಾಖಲು
ತೀರ್ಥಹಳ್ಳಿ ಪಟ್ಟಣದಲ್ಲಿ ಇದೀಗ ಮೊದಲ ಕೊರೊನಾ ಪ್ರಕರಣ ದಾಖಲಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಉಡುಪಿಯ ಹೆಬ್ರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 33 ವರ್ಷದ ನರ್ಸ್ ಒಬ್ಬರಿಗೆ ಸೋಂಕು ದೃಢಪಟ್ಟಿದೆ.
ಸೀಲ್ ಡೌನ್ ಮಾಡುತ್ತಿರುವುದು ಪಟ್ಟಣದ ಬಾಳೆಬೈಲು ಸಮೀಪದ ಮನೆ, ಹೋಟೆಲ್ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ. ಮನೆಯವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ ಸೋಂಕು ತಗುಲಿರುವ ಶಂಕೆ ಇದೆ.
ಅದರಂತೆ ಅವರ ಮನೆ ಮತ್ತು ಸುತ್ತಮುತ್ತಲಿನ ಪ್ರದೇಶ ಸೀಲ್ ಡೌನ್ ಮಾಡಲಾಗಿದೆ. ಇಲ್ಲಿ 4 ಕುಟುಂಬಗಳಿದ್ದು, ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಪತಿ ಆಟೋ ಚಾಲಕನಾಗಿದ್ದು, ಅನೇಕ ಕಡೆ ಓಡಾಡಿರುವ ಅನುಮಾನವಿದೆ.