ಶಿವಮೊಗ್ಗ: ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಔಷಧ ಸಿಂಪಡಣೆ ಮಾಡಲಾಯಿತು.
ಶಿವಮೊಗ್ಗ ನಗರದಲ್ಲಿ ಔಷಧ ಸಿಂಪಡಣೆ ಮಾಡಲಾಯಿತು
ಶಿವಮೊಗ್ಗ: ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಔಷಧ ಸಿಂಪಡಣೆ ಮಾಡಲಾಯಿತು.
ನಗರದ ಹಳೆ ಬಸ್ ನಿಲ್ದಾಣದಿಂದ ಪ್ರಾರಂಭವಾದ ಫಾಗಿಂಗ್ ಬಿ.ಹೆಚ್ ರಸ್ತೆಯ ಮೂಲಕ ಬಸ್ ನಿಲ್ದಾಣ ತಲುಪಿತು. ಮಹಾನಗರ ಪಾಲಿಕೆಯ ಸಿಬ್ಬಂದಿ, ಅಗ್ನಿ ಶಾಮಕ ದಳದವರ ಸಹಾಯದೊಂದಿಗೆ ಅಗ್ನಿ ಶಾಮಕ ವಾಹನದಲ್ಲಿಯೇ ಔಷಧ ಸಿಂಪಡಣೆ ಮಾಡಿದರು.
ನಗರದ ಇತರ ಭಾಗಗಳಲ್ಲಿಯೂ ಔಷಧ ಸಿಂಪಡಣೆ ಮಾಡಲು ತೀರ್ಮಾನಿಸಲಾಗಿದೆ.