ಕರ್ನಾಟಕ

karnataka

ETV Bharat / state

ಸಿದ್ದರಾಮಯ್ಯ ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ: ಯಡಿಯೂರಪ್ಪ ಗರಂ - ಆರ್ ಎಸ್ ಎಸ್

ಸಿದ್ದರಾಮಯ್ಯಗೆ ತಲೆಕೆಟ್ಟಿದೆ. ಅವರು ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು. ಪ್ರಧಾನಿ, ರಾಷ್ಷ್ರಪತಿ, ನಾವೆಲ್ಲರೂ ಆರ್ ಎಸ್ ಎಸ್​ನಿಂದ ಬಂದವರಾಗಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಯಡಿಯೂರಪ್ಪ
ಯಡಿಯೂರಪ್ಪ

By

Published : Sep 29, 2022, 1:25 PM IST

ಶಿವಮೊಗ್ಗ:ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇತ್ತೀಚೆಗೆ ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ.

ನಗರದ ತಮ್ಮ ನಿವಾಸದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ. ಅವರು ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು ಎಂದರು.

ಈ ದೇಶದ ಪ್ರಧಾನಿ ಆರ್ ಎಸ್ ಎಸ್ ನಿಂದ ಬಂದವರು, ರಾಷ್ಷ್ರಪತಿ ಆರ್ ಎಸ್ ಎಸ್ ನಿಂದ ಬಂದವರು, ನಾವೆಲ್ಲರೂ ಆರ್ ಎಸ್ ಎಸ್ ನಿಂದ ಬಂದವರಾಗಿದ್ದೇವೆ. ಸಿದ್ದರಾಮಯ್ಯನವರು ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಬಿಎಸ್​ವೈ ಸಲಹೆ ನೀಡಿದರು.

ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಗರಂ

ಇದನ್ನೂ ಓದಿ:ಕಾಂಗ್ರೆಸ್ ಹಗಲು ದರೋಡೆ ಮಾಡಿದ್ದು, ದೇಶದ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿಲ್ಲ: ಬಿಎಸ್​ವೈ

ಇನ್ನು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ ದಾಳಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಸಿಬಿಐ ಸೇರಿದಂತೆ ಅಯಾ ಸಂಸ್ಥೆಗಳ ಕೆಲಸವನ್ನು ಅದರ ಪಾಡಿಗೆ ಅದು ನಡೆಯುತ್ತಿರುತ್ತದೆ.‌ ಅದಕ್ಕೆ ಪ್ರಕ್ರಿಯಿಸಬೇಕಾಗಿಲ್ಲ ಎಂದು ಹೇಳಿದರು.

ABOUT THE AUTHOR

...view details