ಶಿವಮೊಗ್ಗ: ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಪಕ್ಷ ಸಂಘಟನೆಗಾಗಿ ಕಾಂಗ್ರೆಸ್ ಪಕ್ಷದ ಮುಖಂಡರೊಂದಿಗೆ ನಗರದ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದರು.
ಪಕ್ಷ ಸಂಘಟನೆಗಾಗಿ ಮಾಜಿ ಡಿಸಿಎಂ ಪರಮೇಶ್ವರ್ ಸಭೆ.. ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಹಾಗೂ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯ ಕುರಿತು ಮುಖಂಡರೊಂದಿಗೆ ಕೆಲ ಹೊತ್ತು ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು.
ಮುಂದಿನ ದಿನಗಳಲ್ಲಿ ಪಕ್ಷವನ್ನು ಜಿಲ್ಲೆಯಲ್ಲಿ ಮತ್ತಷ್ಟು ಗಟ್ಟಿಗೊಳಿಸಬೇಕು. ಆ ಮೂಲಕ ಮತ್ತೊಮ್ಮೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಾಬಲ್ಯ ಸಾಧಿಸುವಂತೆ ಮಾಡಲು, ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ ಎಸ್ ಸುಂದರೇಶ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್, ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್, ಮಾಜಿ ಸಚಿವ ಕಿಮನ್ನೆ ರತ್ನಾಕರ್ ಸೇರಿ ಪಕ್ಷದ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.