ಶಿವಮೊಗ್ಗ: ಜಿಲ್ಲಾ ಪಂಚಾಯಿತಿ ಈಸೂರು ಕ್ಷೇತ್ರದ ಮಾಜಿ ಸದಸ್ಯ ಈಸೂರು ಬಸವರಾಜ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ 15 ದಿನಗಳಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಾಜಿ ಸಿಎಂ ಬಂಗಾರಪ್ಪನವರ ಅನುಯಾಯಿಗಳಾಗಿ ರಾಜಕೀಯ ಪ್ರವೇಶ ಮಾಡಿದ್ದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಹೋರಾಟದ ಹಾದಿಯಿಂದಲೇ ಸ್ಥಳೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಆವರ ಅಗಲಿಕೆಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಸಂಸದ ಬಿ.ವೈ ರಾಘವೇಂದ್ರ ಸಂತಾಪ ಸೂಚಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.