ಶಿವಮೊಗ್ಗ: ಸೊರಬ ತಾಲೂಕಿನ ಪ್ರವಾಹ ಪ್ರದೇಶಕ್ಕೆ ಭೇಟಿ ನೀಡಿ, ಸಾಂತ್ವನ ಹೇಳಿದ ಜೆಡಿಎಸ್ ಯುವ ಘಟಕದ ಕಾರ್ಯಾಧ್ಯಕ್ಷ ಮಧು ಬಂಗಾರಪ್ಪ.
ವರದಾ ನದಿ ಪ್ರವಾಹ.. ಮಾಜಿ ಶಾಸಕ ಮಧು ಬಂಗಾರಪ್ಪ ಭೇಟಿ - ನೀರಾವರಿ ಯೋಜನೆ
ಸೊರಬ ತಾಲೂಕಿನಲ್ಲಿ ವರದಾ ನದಿಯ ಪ್ರವಾಹಕ್ಕೆ ತುತ್ತಾದ ಪ್ರದೇಶಗಳಿಗೆ ಭೇಟಿ ನೀಡಿದ ಮಾಜಿ ಶಾಸಕ ಮಧು ಬಂಗಾರಪ್ಪ. ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ.
ನೆರೆ ಹಾವಳಿ ಪ್ರದೇಶಕ್ಕೆ ಭೇಟಿ ನೀಡದ ಮಾಜಿ ಶಾಸಕ ಮಧು ಬಂಗಾರಪ್ಪ
ಸೊರಬ ತಾಲೂಕಿನಲ್ಲಿ ವರದಾ ನದಿಯ ಪ್ರವಾಹದಿಂದ ಅಗಸನವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳು ಹಾಗೂ ನೆಲ್ಲಿಕೊಪ್ಪ ಗ್ರಾಮ ವ್ಯಾಪ್ತಿಯಲ್ಲಿ ಸಾಕಷ್ಟು ಹಾನಿಯುಂಟಾಗಿತ್ತು. ಶನಿವಾರ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಸಂತ್ರಸ್ತರ ಗ್ರಾಮಗಳಿಗೆ ಭೇಟಿ ನೀಡಿದರು.ಸಂತ್ರಸ್ತರ ಎಲ್ಲಾ ಕಷ್ಟ ಸುಖಗಳಲ್ಲಿ ನಾವಿದ್ದೇವೆ. ಯಾರುೂ ಎದೆಗುಂದ ಬೇಡಿ ಎಂದರು.
ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿ ತಾಲೂಕಿಗೆ ಜಾರಿಯಾದ ನೀರಾವರಿ ಯೋಜನೆಯನ್ನು ತಕ್ಷಣ ಜಾರಿ ಮಾಡಬೇಕು ಎಂದು ಆಗ್ರಹಿಸಿದರು. ಈ ವೇಳೆ ಸೊರಬದ ಜೆಡಿಎಸ್ ಮುಖಂಡರು ಹಾಜರಿದ್ದರು.