ಶಿವಮೊಗ್ಗ: ಕೊರೊನಾ ಮಹಾಮಾರಿಗೆ ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರುದ್ರಪ್ಪ ದಾನೇರ್ ಬಲಿಯಾಗಿದ್ದಾರೆ.
ಶಿವಮೊಗ್ಗ ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕೊರೊನಾಗೆ ಬಲಿ - ಶಿವಮೊಗ್ಗ ಕೊರೊನಾ ಪ್ರಕರಣಗಳ ಸಂಖ್ಯೆ
ಕೊರೊನಾದಿಂದ ಶಿವಮೊಗ್ಗ ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರುದ್ರಪ್ಪ ದಾನೇರ್ ಸಾವನ್ನಪ್ಪಿದ್ದಾರೆ.
ರುದ್ರಪ್ಪ ದಾನೇರ್ ಕೊರೊನಾಗೆ ಬಲಿ
70ವರ್ಷದ ರುದ್ರಪ್ಪ ದಾನೇರ್ ಮೃತ ವ್ಯಕ್ತಿ. ಇವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆಂಬಲಿಗ ಆಗಿದ್ದರು. ಶಿಕಾರಿಪುರ ತಾಲೂಕು ತೂಗರ್ಸಿ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಬಳಿಕ ಶಿಕಾರಿಪುರ ತಾಲೂಕು ಬಿಜೆಪಿ ಅಧ್ಯಕ್ಷರಾಗಿ, ಶಿರಾಳಕೊಪ್ಪದ ವಿಶ್ವ ಹಿಂದೂ ಪರಿಷತ್ನ ಸೇವಾ ವಿಕಾಸ ಶಾಲೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಕೆಲ ದಿನಗಳ ಹಿಂದೆ, ಕೊರೊನಾ ಸೋಂಕು ದೃಢವಾಗಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.