ಶಿವಮೊಗ್ಗ:ನಿನ್ನೆ ತಡರಾತ್ರಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷನ ಅಂತ್ಯಕ್ರಿಯೆ ವಿದ್ಯಾನಗರದಲ್ಲಿರುವ ರೋಟರಿ ಚಿತಾಗಾರದಲ್ಲಿ ನಡೆದಿದೆ.
ಹರ್ಷನ ಚಿತೆಗೆ ತಂದೆಯಿಂದಲೇ ಅಗ್ನಿಸ್ಪರ್ಶ ಮಾಡಲಾಯಿತು. ಅಂತ್ಯಕ್ರಿಯೆ ಅಂತಿಮ ವಿಧಿ ವಿಧಾನಗಳು ಕಾಳಿ ಸ್ವಾಮೀಜಿ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಉಪಸ್ಥಿತರಿದ್ದರು.