ಕರ್ನಾಟಕ

karnataka

ETV Bharat / state

ಬಾಲಕಿ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್ - ಕಠಿಣ ಕಾರಾಗೃಹ ಶಿಕ್ಷೆ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗ ಪೊಕ್ಸೊ ನ್ಯಾಯಾಲಯ ಸೋಮವಾರ ಆದೇಶಿಸಿದೆ.

Representative image
ಸಾಂದರ್ಭಿಕ ಚಿತ್ರ

By

Published : Oct 18, 2022, 7:39 AM IST

ಶಿವಮೊಗ್ಗ:ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೊಕ್ಸೊ) ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಆದೇಶ ನೀಡಿದೆ.

ಭದ್ರಾವತಿ ತಾಲೂಕಿನ ಗ್ರಾಮವೊಂದರ ನಿವಾಸಿ ರಾಘವೇಂದ್ರ ಶಿಕ್ಷೆಗೆ ಗುರಿಯಾದ ಆರೋಪಿ. ಈತ 3 ವರ್ಷ 4 ತಿಂಗಳ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 376(ಎ ಮತ್ತು ಬಿ) ಐಪಿಸಿ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು‌. ಪ್ರಕರಣ ದಾಖಲಿಸಿಕೊಂಡ ಸಿಪಿಐ ಇ.ಓ ಮಂಜುನಾಥ್ ಅವರು ಆರೋಪಿಯ ವಿರುದ್ಧ ಜಿಲ್ಲಾ ಸತ್ರ ನ್ಯಾಯಾಲಯದ ಎರಡನೇ ಫಾಸ್ಟ್ ಟ್ರಾಕ್ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

ಪ್ರಕರಣದ ವಾದ ಅಲಿಸಿದ ಪೊಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಮೋಹನ್.ಜೆ.ಎಸ್ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ.ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಕಾಲ ಹೆಚ್ಚುವರಿ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ.‌ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ವಾದ ಮಂಡಿಸಿದ್ದರು.

ಇದನ್ನೂ ಓದಿ:ಮದುವೆಗೆ ಬಂದ ಬಾಲಕಿ ಮೇಲೆ ಅತ್ಯಾಚಾರ; ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

ABOUT THE AUTHOR

...view details