ಶಿವಮೊಗ್ಗ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಜಿಲ್ಲೆಯ ಭದ್ರಾವತಿ ತಾಲೂಕಿನ ಗುಡುಮಗಟ್ಟದಲ್ಲಿ ಆಯೋಜಿಸಲಾಗಿದ್ದ ಹೊಳಲೂರು ಹಾಗೂ ಆನವೇರಿ ಭಾಗದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ಬೆಳೆಗಾರರು ಯಾರೂ ಆತಂಕ ಪಡುವ ಅಗತ್ಯವಿಲ್ಲ. ಅಡಿಕೆಗೆ ಒಳ್ಳೆ ಬೆಲೆ ಸಿಗುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರೋತ್ಸಾಹಧನ ನೀಡುತ್ತೆ ಎಂದರು.