ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಮುಸ್ಲಿಂ ಕಾಲೇಜಿಗೆ ಅವಕಾಶವಿಲ್ಲ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ - ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

ರಾಜ್ಯಪಾಲರು ಕಾರವಾರದಿಂದ ಬೆಂಗಳೂರಿಗೆ ಹೋಗುವ ವೇಳೆ ಹೆಲಿಕಾಪ್ಟರ್​ಗೆ ಇಂಧನ ತುಂಬಿಸಿಕೊಳ್ಳುವ ಸಲುವಾಗಿ ಆಗಮಿಸಿದ್ದರು ಎಂದು ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಮುಸ್ಲಿಂ ಕಾಲೇಜಿಗೆ ಅವಕಾಶವಿಲ್ಲವೆಂದು ಪ್ರತಿಕ್ರಿಯಿಸಿದ್ದಾರೆ.

government-no-plan-about-separate-muslim-colleges
ರಾಜ್ಯದಲ್ಲಿ ಮುಸ್ಲಿಂ ಕಾಲೇಜಿಗೆ ಅವಕಾಶವಿಲ್ಲ: ಕೆ.ಎಸ್.ಈಶ್ವರಪ್ಪ.

By

Published : Dec 5, 2022, 2:04 PM IST

Updated : Dec 5, 2022, 2:41 PM IST

ಶಿವಮೊಗ್ಗ: ರಾಜ್ಯದಲ್ಲಿ ಮುಸ್ಲಿಂ ಕಾಲೇಜಿಗೆ ಅವಕಾಶವಿಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಮುಸ್ಲಿಂ ಕಾಲೇಜಿಗೆ ಅವಕಾಶವಿಲ್ಲ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಸ್ಲಿಂ ಕಾಲೇಜು ಸ್ಥಾಪಿಸುವ ಪ್ರಸ್ತಾಪ ಇಲ್ಲ. ರಾಜ್ಯ ವಕ್ಫ್ ಮಂಡಳಿಯು ಸಹ ಈ ರೀತಿಯ ಪ್ರಸ್ತಾವನೆ ಸಲ್ಲಿಸಿಲ್ಲ. ಹೀಗಾಗಿ ರಾಜ್ಯದಲ್ಲಿ ಮುಸ್ಲಿಮರಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆಗೆ ಅವಕಾಶವಿಲ್ಲ ಎಂದಿದ್ದಾರೆ.

ಇನ್ನು ಶಿವಮೊಗ್ಗಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಆಗಮನದ ಹಿನ್ನೆಲೆಯಲ್ಲಿ ಅವರನ್ನು ಶಿವಮೊಗ್ಗ ನಗರದ ಜನತೆ ಪರವಾಗಿ ಸ್ವಾಗತ ಮಾಡಿದ್ದೇನೆ. ಅವರು ಕಾರವಾರದಿಂದ ಬೆಂಗಳೂರಿಗೆ ಹೋಗುವ ವೇಳೆ ಹೆಲಿಕಾಪ್ಟರ್​ಗೆ ಇಂಧನ ತುಂಬಿಸಿಕೊಳ್ಳುವ ಸಲುವಾಗಿ ಆಗಮಿಸಿದ್ದರು ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ:ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ಉದ್ದೇಶ ಸರ್ಕಾರಕ್ಕೆ ಇಲ್ಲ: ನಾಗೇಶ್

Last Updated : Dec 5, 2022, 2:41 PM IST

ABOUT THE AUTHOR

...view details