ಶಿವಮೊಗ್ಗ:ತಾಲೂಕಿನ ಹಾರೊ ಬೆನವಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಗ್ರಾಮದಲ್ಲಿ ಎಲ್ಲಾ ಕೋಮಿನವರು ವಾಸವಾಗಿದ್ದಾರೆ. ಆದರೆ ನಿನ್ನೆ ಒಂದು ಕೋಮಿನವರು ಬಹುಸಂಖ್ಯಾತರ ಮೇಲೆ ಹಲ್ಲೆಗೆ ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿದೆ.
ಈ ವಿಷಯ ತಿಳಿದ ಬಹುಸಂಖ್ಯಾತರು ಒಂದು ಕೋಮಿನ ಯುವಕರಿಗೆ ಈ ರೀತಿ ಮಾಡುವುದು ತಪ್ಪು ಎಂದು ಹೇಳಲು ಹೋದಾಗ ಮಾತಿಗೆ ಮಾತು ಬೆಳೆದು ಘರ್ಷಣೆ ಆಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಹೊಳೆ ಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗುಂಪು ಘರ್ಷಣೆಯನ್ನು ತಪ್ಪಿಸಿದ್ದಾರೆ. ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಥಳದಲ್ಲಿ ಡಿಎಆರ್ ಹಾಗೂ ಹೊಳೆಹೊನ್ನೂರು ಪೊಲೀಸರು ಮೊಕ್ಕಾಂ ಹೂಡಿದ್ದು, ಸದ್ಯ ಪರಿಸ್ಥಿತಿ ಶಾಂತಯುತವಾಗಿದೆ.