ಶಿವಮೊಗ್ಗ: ಲಾಕ್ಡೌನ್ ಅವಧಿಯನ್ನು ಕರ್ತವ್ಯದ ದಿನಗಳೆಂದು ಪರಿಗಣಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ವೇತನ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಅತಿಥಿ ಉಪನ್ಯಾಸಕರು ಮೌನ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಲಾಕ್ಡೌನ್ ಅವಧಿಯಲ್ಲಿ ವೇತನ ನೀಡುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಧರಣಿ!
ಲಾಕ್ಡೌನ್ ಅವಧಿಯಲ್ಲಿ ಹರಿಯಾಣ ಹಾಗೂ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಅತಿಥಿ ಉಪಾನ್ಯಾಸಕರಿಗೆ ವೇತನ ನೀಡಿದ್ದಾರೆ. ಅದೇ ಮಾದರಿಯಲ್ಲಿ ಲಾಕ್ಡೌನ್ ಅವಧಿಯನ್ನು ಕರ್ತವ್ಯದ ದಿನಗಳೆಂದು ಎಂದು ಪರಿಗಣಿಸಿ ಅತಿಥಿ ಉಪನ್ಯಾಸಕರಿಗೆ ಸಂಬಳ ನೀಡಬೇಕು ಎಂದು ಅತಿಥಿ ಉಪನ್ಯಾಸಕರು ಮೌನ ಪ್ರತಿಭಟನೆ ನಡೆಸಿದ್ದಾರೆ.
ಅತಿಥಿ ಉಪನ್ಯಾಸಕರ ಪ್ರತಿಭಟನೆ
ಲಾಕ್ಡೌನ್ ಅವಧಿಯಲ್ಲಿ ಹರಿಯಾಣ ಹಾಗೂ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಅತಿಥಿ ಉಪಾನ್ಯಾಸಕರಿಗೆ ವೇತನ ನೀಡಿದ್ದಾರೆ. ಅದೇ ರೀತಿ ರಾಜ್ಯದಲ್ಲೂ ಘೋಷಿಸಬೇಕು. ಅತಿಥಿ ಉಪನ್ಯಾಸಕರಿಗೆ ಪಿಎಫ್ ಹಾಗೂ ಉದ್ಯೋಗ ಭದ್ರತೆ ಘೋಷಿಸಬೇಕು ಎಂದು ಕೋರಿದರು.
ಅತಿಥಿ ಉಪನ್ಯಾಸಕರಿಗೆ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಬೆಂಬಲ ವ್ಯಕ್ತಪಡಿಸಿದೆ. ಈ ವೇಳೆ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ರಾಜ್ಯಾಧ್ಯಕ್ಷ ಸೋಮಶೇಖರ್ ಶಿಮೊಗ್ಗಿ, ಡಿಎಸ್ಎಸ್ನ ಹಾಲೇಶಪ್ಪ ಸೇರಿ ಇತರರು ಹಾಜರಿದ್ದರು.